ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಹೊಸದಾಗಿ ರಚನೆಯಾದ ವಿಪಕ್ಷಗಳ ಮೈತ್ರಿಕೂಟ I.N.D.I.A ಸಿದ್ಧತೆ ನಡೆಸಿದಂತಿದೆ. ಮಂಗಳವಾರ ಬೆಳಗ್ಗೆ ನಡೆದ ತಮ್ಮ ಸಭೆಯಲ್ಲಿ ಕಾಂಗ್ರೆಸ್ ಮತ್ತು ಇತರ ಸಮಾನ ಮನಸ್ಕ ಪಕ್ಷಗಳ ನಾಯಕರು ಅವಿಶ್ವಾಸ ನಿರ್ಣಯ ಮಂಡಿಸುವ ಪ್ರಸ್ತಾಪವನ್ನು ಚರ್ಚಿಸಿರುವ ಬಗ್ಗೆ ವರದಿಯಾಗಿವೆ.
ಸಂಸತ್ತಿನ ಮುಂಗಾರು ಅಧಿವೇಶನದ ನಾಲ್ಕನೇ ದಿನದ ಕಲಾಪ ಪ್ರಾರಂಭವಾಗುವ ಮೊದಲು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಐಎನ್‌ಡಿಐಎ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್, ಪ್ರಮೋದ್ ತಿವಾರಿ, ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ ಮತ್ತು ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒ’ಬ್ರೇನ್ ಉಪಸ್ಥಿತರಿದ್ದರು.
ಮಣಿಪುರದ ಪರಿಸ್ಥಿತಿಯ ಬಗ್ಗೆ ವಿಸ್ತೃತ ಚರ್ಚೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗಾಗಿ ಪ್ರತಿಪಕ್ಷಗಳ ಬೇಡಿಕೆಯಿಂದಾಗಿ ಉಭಯ ಸದನಗಳು ಮುಂದೂಡಲ್ಪಟ್ಟವು. ಅವಿಶ್ವಾಸ ನಿರ್ಣಯ ಸೇರಿದಂತೆ ವಿವಿಧ ಆಯ್ಕೆಗಳನ್ನು ವಿರೋಧ ಪಕ್ಷಗಳು ಚರ್ಚಸಿರುಚುದಾಗಿ ತಿಳಿದುಬಂದಿದೆ.
ಮಣಿಪುರದ ಬಗ್ಗೆ ಚರ್ಚೆಗೆ ಸಿದ್ಧ ಎಂದು ಸರ್ಕಾರ ಹೇಳಿದರೂ ವಿರೋಧ ಪಕ್ಷಗಳು ಮತದಾನದ ನಿಯಮದ ಅಡಿಯಲ್ಲಿ ಚರ್ಚೆಗೆ ಒತ್ತಾಯಿಸುತ್ತಿವೆ.