ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಟೇಕಾಫ್ ಆದ ಬಳಿಕ ಅದರ ಟಯರ್‌ನ ಭಾಗಗಳು ರನ್‍ವೇಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ತಕ್ಷಣವೇ ನಿಲ್ದಾಣದ ಸಿಬ್ಬಂದಿ ಎಟಿಸಿಗೆ ಮಾಹಿತಿ ನೀಡಿ ವಿಮಾನವನ್ನು ವಾಪಸ್ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ.
ದೆಹಲಿಯಿಂದ (Delhi) ಪ್ಯಾರಿಸ್‍ಗೆ (Paris) ತೆರಳುತ್ತಿದ್ದ ಏರ್ ಇಂಡಿಯಾ (Air India) ವಿಮಾನ (Flight) ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಟೈರ್‌ನ ಭಾಗಗಳು ರನ್ ವೇಯಲ್ಲಿ ಕಾಣಿಸಿದೆ. ಬಳಿಕ ದೆಹಲಿ ಏರ್ ಟ್ರಾಫಿಕ್ ಕಂಟ್ರೋಲ್ (ATC) ನೀಡಿದ ಮಾಹಿಯ ಆಧಾರದ ಮೇಲೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ.
ಪ್ರಯಾಣಿಕರ ಸುರಕ್ಷತೆಗೆ ಏರ್ ಇಂಡಿಯಾ ಮೊದಲ ಆದ್ಯತೆ ನೀಡುತ್ತದೆ. ಇದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.
ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತದೆ. ಪ್ರಯಾಣಿಕರಿಗೆ ಯಾವುದೇ ಹಾನಿಯಾದ ವರದಿ ಆಗಿಲ್ಲ.