ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಟ್ ಲ್ಯಾಗ್ ಪಬ್ ನಲ್ಲಿ ಅವಧಿ ಮೀರಿ ಪಾರ್ಟಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೇಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಸ್ಯಾಂಡಲ್ ವುಡ್ ನ ಹಲವು ನಟರು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಕೆಲ ದಿನಗಳ ಹಿಂದೆ ಜೆಟ್ ಲ್ಯಾಗ್ ಪಬ್ ನಲ್ಲಿ ಕಾಟೇರ ಚಿತ್ರ ತಂಡ ಸಿನಿಮಾ ಯಶಸ್ಸಿನ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟರಿಗೆ ಭರ್ಜರಿ ಪಾರ್ಟಿ ಆಯೋಜಿಸಿತ್ತು. ಬೆಳಗಿನ ಜಾವದವರೆಗೂ ಪಾರ್ಟಿ ಆಯೋಜನೆ, ಮದ್ಯಸರಬರಾಜು ಮಾಡಿದ್ದ ಹಿನ್ನೆಲೆಯಲ್ಲಿ ಪಬ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪಾರ್ಟಿಯಲ್ಲಿ ಬಾಗಿಯಾಗಿದ್ದ ನಟ ದರ್ಶನ್, ಅಭಿಷೇಕ್ ಅಂಬರೀಶ್, ಡಾಲಿ ಧನಂಜಯ್, ನೀನಾಸಂ ಸತೀಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದ್ದ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ವಿಚಾರಣೆಗೆ ಹಜರಾಗುವಂತೆ ಸೂಚಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಸುಬ್ರಹ್ಮಣ್ಯನಗರ ಠಾಣೆಗೆ ನಟ ದರ್ಶನ್, ಅಭಿಷೇಕ್, ಧನಂಜಯ್ ಸೇರಿದಂತೆ ಹಲವು ನಟರು, ಕಾಟೇರ ಚಿತ್ರತಂಡ ವಿಚಾರಣೆಗೆ ಹಾಜರಾಗಿದೆ.