ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಾ. ರಾಜ್ಕುಮಾರ್ ಅವರ ಕುಟುಂಬದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಪಾರ್ವತಮ್ಮ ರಾಜ್ಕುಮಾರ್ ಅವರ ತಮ್ಮನ ಪುತ್ರನಾದ ಸೂರಜ್, ಗಂಭೀರವಾದ ಅಪಘಾತಕ್ಕೆ ಒಳಗಾಗಿದ್ದಾರೆ.
ಸೂರಜ್ ಊಟಿಗೆ ತೆರಳುತ್ತಿದ್ದರು, ಈ ವೇಳೆ ನಂಜನಗೂಡಿನ ಬಳಿ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ ಶನಿವಾರ (ಜೂನ್ 24) ಸಂಜೆ ನಾಲ್ಕು ಗಂಟೆ ಸುಮಾರಿಗೆ ನಡೆದಿದೆ.
ಈ ರಸ್ತೆ ಅಪಘಾತದಲ್ಲಿ ಸೂರಜ್ ಕಾಲಿಗೆ ತೀವ್ರವಾಗಿ ಪೆಟ್ಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಬಲಕಾಲು ಕತ್ತರಿಸಲಾಗಿದೆ ಎನ್ನಲಾಗಿದೆ.
ವಿಷಯ ತಿಳಿದ ಬೇಗೂರು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.