ಪಿಎಎಸ್​ಐ ನೇಮಕಾತಿ ಅಕ್ರಮ: ಮರುಪರೀಕ್ಷೆಯೇ ಸೂಕ್ತ ಎಂದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಿಎಎಸ್​ಐ ನೇಮಕಾತಿ ಅಕ್ರಮ(545 PSI Recruitment Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ (Karnataka High Court)​ ಮಹತ್ವದ ಅಭಿಪ್ರಾಯಪಟ್ಟಿದೆ.

ಆಯ್ಕೆ ಪಟ್ಟಿ ರದ್ದುಪಡಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಇಂದು (ಆಗಸ್ಟ್ 04) ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಮೇಲ್ನೋಟಕ್ಕೆ ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆಯೇ ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಪಿಎಸ್​ಐ ನೇಮಕಾತಿ ಆಯ್ಕೆ ಪಟ್ಟಿ ರದ್ದುಪಡಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಪಿ.ಎಸ್.ದಿನೇಶ್ ಕುಮಾರ್, ನ್ಯಾ.ಟಿ.ಜಿ.ಶಿವಶಂಕರೇಗೌಡರಿದ್ದ ವಿಭಾಗೀಯ ಪೀಠ, ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆಯೇ ಸೂಕ್ತ ಎಂದು ಅಭಿಪ್ರಾಯಪಟ್ಟಿದೆ. ಬಳಿಕ ಅರ್ಜಿದಾರರ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದರು. ಇದರಿಂದ ಕೋರ್ಟ್, ವಿಚಾರಣೆ ಆ.7ಕ್ಕೆ ಮುಂದೂಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!