ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ: ಆರ್‌ಎಸ್‌ಎಸ್‌ ಸ್ವಾಗತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸ್ವಾಗತಿಸಿದೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಮತ್ತು ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು, ಅಮೃತ ಕಾಲದ ಜತೆಗೆ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹತ್ವದ ಮಸೂದೆ ಅಂಗೀಕಾರವಾಗಿರುವುದನ್ನು ಸ್ವಾಗತಿಸಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ‘ಮಹಿಳಾ ಸಬಲೀಕರಣ ಮತ್ತು ಸಮಾನ ಭಾಗವಹಿಸುವಿಕೆಯನ್ನು ಖಾತ್ರಿಪಡಿಸುವ ‘ನಾರಿ ಶಕ್ತಿ ವಂದನ್ ಅಧಿನಿಯಮ 2023′ ಅನ್ನು ಅಂಗೀಕರಿಸುವ ಮೂಲಕ ಭಾರತದ ಸಂಸತ್ತು ಹೊಸ ಇತಿಹಾಸ ಸೃಷ್ಟಿಸಿದೆ. ಮಹತ್ವದ ಈ ನಿರ್ಧಾರವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸುತ್ತದೆ. ಅಲ್ಲದೆ, ಹೆಚ್ಚು ಒಳಗೊಳ್ಳುವಂತೆ ಮಾಡುತ್ತದೆ’ ಎಂದು ತಿಳಿಸಿದ್ದಾರೆ.

ಈ ನಿರ್ಧಾರವನ್ನು ಆರ್‌ಎಸ್‌ಎಸ್ ಸ್ವಾಗತಾರ್ಹ ಮತ್ತು ಶ್ಲಾಘನೀಯ ಹೆಜ್ಜೆ ಎಂದೇ ಪರಿಗಣಿಸುತ್ತದೆ. ಮಹಿಳೆಯರ ಸಹಭಾಗಿತ್ವವು ದೇಶದ ಅಭಿವೃದ್ಧಿಗೆ ಹೊಸ ಆಯಾಮಗಳನ್ನು ನೀಡುವ ವಿಶ್ವಾಸ ನಮಗಿದೆ’ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!