ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಹಠಾತ್ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಿಂದ ಲಕ್ನೋಗೆ ಪ್ರಯಾಣಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಹಠಾತ್ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಲಕ್ನೋ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಮೃತರನ್ನು ಬಿಹಾರದ (Bihar) ಗೋಪಾಲ್‌ಗಂಜ್‌ನ ಆಸಿಫುಲ್ಲಾ ಅನ್ಸಾರಿ(52) ಎಂದು ಗುರುತಿಸಲಾಗಿದೆ.

ಬೆಳಗ್ಗೆ 8:10ಕ್ಕೆ ವಿಮಾನ ಲಕ್ನೋದ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ನಂತರ, ಸಿಬ್ಬಂದಿ ಆಸಿಫುಲ್ಲಾರೊಂದಿಗೆ ಮಾತನಾಡಲು ಪ್ರಯತ್ನಿಸಿದರು.ಈ ವೇಳೆ ಆಸಿಫುಲ್ಲಾರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ವಿಮಾನದಲ್ಲಿದ್ದ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದರು. ಪ್ರಯಾಣದ ಮಧ್ಯೆ ಆಸಿಫುಲ್ಲಾ ಅವರು ಮೃತಪಟ್ಟಿರಬಹುದು ಎನ್ನಲಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!