Wednesday, September 27, 2023

Latest Posts

ಪ್ರಯಾಣಿಕ ಅಸ್ವಸ್ಥ: ಜೈಪುರದಲ್ಲಿ ವಿಮಾನ ತುರ್ತು ಭೂಸ್ಪರ್ಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶುಕ್ರವಾರ ದೆಹಲಿಯಿಂದ ಮಧ್ಯಪ್ರದೇಶದ ಜಬಲ್‌ಪುರಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಕಾರಣ ವಿಮಾನವನ್ನು ರಾಜಸ್ಥಾನದ ಜೈಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಅಲಯನ್ಸ್‌ ಏರ್‌ ಸಂಸ್ಥೆಯ ವಿಮಾನವು ದೆಹಲಿ ವಿಮಾನ ನಿಲ್ದಾಣದಿಂದ ಹೊರಟ ಕೆಲ ಸಮಯದಲ್ಲೇ 52 ವರ್ಷದ ವ್ಯಕ್ತಿಯೊಬ್ಬರು ರಕ್ತದೊತ್ತಡ ಕಡಿಮೆಯಾದ ಕಾರಣ ಅಸ್ವಸ್ಥರಾದರು. ಈ ಕಾರಣಕ್ಕೆ ವಿಮಾನವನ್ನು ಜೈಪುರ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ವಸ್ಥರಾದ ವ್ಯಕ್ತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ವಿಮಾನವು ಜಬಲ್‌ಪುರಕ್ಕೆ ತೆರಳಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!