October 21, 2026
Wednesday, October 21, 2026
spot_img

ಬೆಂಕಿಗಾಹುತಿಯಾದ ಪ್ಯಾಸೆಂಜರ್ ರೈಲು ಬೋಗಿ: ಪ್ರಯಾಣಿಕರ ಜಾಗರೂಕತೆಯಿಂದ ತಪ್ಪಿದ ದುರಂತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ಕಟ್ವಾ ರೈಲು ನಿಲ್ದಾಣದಲ್ಲಿ ಇಂದು ಮುಂಜಾನೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಿಲ್ದಾಣದ ಎರಡನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದ ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಖಾಲಿ ಬೋಗಿಯೊಂದರಲ್ಲಿ ಬೆಳಗಿನ ಜಾವ ಸುಮಾರು 4:30ಕ್ಕೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.

ಬೋಗಿಯಿಂದ ದಟ್ಟವಾದ ಹೊಗೆ ಮತ್ತು ಬೆಂಕಿ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹಾಗೂ ಪ್ರಯಾಣಿಕರು ತಕ್ಷಣವೇ ರೈಲ್ವೆ ಸಿಬ್ಬಂದಿಗೆ ಮಾಹಿತಿ ನೀಡಿದರು. ಕೂಡಲೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಬೆಂಕಿ ಇಡೀ ರೈಲಿಗೆ ಹರಡದಂತೆ ತಡೆಯಲು ಜಾಣ್ಮೆ ಪ್ರದರ್ಶಿಸಿ, ಪೀಡಿತ ಬೋಗಿಯನ್ನು ರೈಲಿನಿಂದ ಬೇರ್ಪಡಿಸಿದರು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಪರಿಶ್ರಮದ ನಂತರ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾದರು. ಅದೃಷ್ಟವಶಾತ್, ರೈಲು ಖಾಲಿ ಇದ್ದುದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ಅಥವಾ ಅನ್ಯ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆಯೇ ಎಂಬ ಬಗ್ಗೆ ರೈಲ್ವೆ ಇಲಾಖೆ ತನಿಖೆಗೆ ಆದೇಶಿಸಿದೆ.

Must Read