ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರೈಲ್ವೆ ಮಾರ್ಗದಲ್ಲಿ ನಿಲ್ಲಿಸಿದ್ದ ಸರಕು ರೈಲಿಗೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದು ಕನಿಷ್ಠ 31 ಜನರು ಗಾಯಗೊಂಡಿದ್ದಾರೆ.
ಶೇಖುಪುರ ಜಿಲ್ಲೆಯ ಕಿಲಾ ಸತ್ತಾರ್ ಶಾ ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ.ಮಿಯಾನ್ವಾಲಿಯಿಂದ ಲಾಹೋರ್ಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ನಿಲ್ಲಿಸಿದ್ದ ಸರಕು ರೈಲು ಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ 31 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ. ಗಾಯಗೊಂಡ ಐವರು ಪ್ರಯಾಣಿಕರನ್ನು ಜಿಲ್ಲಾ ಪ್ರಧಾನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.ಅಪಘಾತದ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.