January21, 2026
Wednesday, January 21, 2026
spot_img

ಸ್ಲೋವಾಕಿಯಾದಲ್ಲಿ ಪ್ಯಾಸೆಂಜರ್​ ರೈಲುಗಳ ನಡುವೆ ಡಿಕ್ಕಿ: 30ಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಲೋವಾಕಿಯಾದ ರಾಜಧಾನಿ ಬ್ರಾಟಿಸ್ಲಾವಾ ಮತ್ತು ಪೆಜಿನೋಕ್ ನಡುವಿನ ಮಾರ್ಗದಲ್ಲಿ ಎರಡು ಪ್ಯಾಸೆಂಜರ್ ರೈಲುಗಳು ಪರಸ್ಪರ ಡಿಕ್ಕಿಯಾಗಿದ್ದು, ಈ ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ದೃಢಪಡಿಸಿದ್ದಾರೆ.

ಅದೃಷ್ಟವಶಾತ್, ಈವರೆಗೆ ಯಾವುದೇ ಸಾವು ಸಂಭವಿಸಿಲ್ಲ. ಆದರೆ ಈ ಘಟನೆ ಸ್ಲೋವಾಕಿಯಾದ ರೈಲು ಸುರಕ್ಷತಾ ವ್ಯವಸ್ಥೆಯ ಮೇಲೆ ಹೊಸ ಪ್ರಶ್ನೆಗಳನ್ನು ಎಬ್ಬಿಸಿದೆ.

ಸರ್ಕಾರಿ ರೈಲು ಸಂಸ್ಥೆ ನೀಡಿದ ಮಾಹಿತಿಯ ಪ್ರಕಾರ, ನೈಟ್ರಾದಿಂದ ಬ್ರಾಟಿಸ್ಲಾವಾಕ್ಕೆ ಹೋಗುತ್ತಿದ್ದ REX 1814 ರೈಲು, ಪೆಜಿನೋಕ್ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಎಕ್ಸ್ 620 ರೈಲಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭಾರೀ ರಭಸಕ್ಕೆ ಹಲವು ಬೋಗಿಗಳು ಹಳಿತಪ್ಪಿ ಉರುಳಿದ್ದು, ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, 11 ಮಂದಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಸಿಗ್ನಲ್ ದೋಷ ಇರಬಹುದೆಂದು ಪ್ರಾಥಮಿಕ ಶಂಕೆ ವ್ಯಕ್ತವಾಗಿದೆ.

Must Read