September 5, 2026
Saturday, September 5, 2026
spot_img

ವಿಮಾನದ ಬಾತ್ ರೂಮ್‌ನಲ್ಲಿ ‘ಬಾಂಬ್’ ಎಂದು ಬರೆದ ಪ್ರಯಾಣಿಕ: ಮುಂದೇನಾಯ್ತು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಓರ್ವ ಪ್ರಯಾಣಿಕನು ವಿಮಾನದ ಬಾತ್ ರೂಮ್‌ನಲ್ಲಿ ‘ಬಾಂಬ್’ ಎಂದು ಪೆನ್‌ನಿಂದ ಬರೆದ ಘಟನೆ ನಡೆದಿದೆ. ಈ ಬರಹವನ್ನು ನೋಡಿ ವಿಮಾನ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಪರಿಶೀಲನೆಯ ನಂತರ ಭಯಪಡುವ ಅಗತ್ಯವಿಲ್ಲವೆಂದು ತಿಳಿದುಬಂದಿದೆ.

ಸುರಕ್ಷತೆಯ ದೃಷ್ಟಿಯಿಂದ ವಿಮಾನವನ್ನು ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದ್ದು, ಏರ್‌ಪೋರ್ಟ್ ಸುರಕ್ಷತಾ ಸಿಬ್ಬಂದಿ ತಕ್ಷಣ ಕ್ರಮ ಕೈಗೊಂಡಿದ್ದಾರೆ. 168 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ ಬಳಿಕ ಸಂಪೂರ್ಣ ವಿಮಾನ ಮತ್ತು ಪ್ರಯಾಣಿಕರ ಪರಿಶೀಲನೆ ನಡೆಸಲಾಗಿದ್ದು, ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ.

‘ಬಾಂಬ್’ ಎಂದು ಬರೆದ ವ್ಯಕ್ತಿ ಯಾರೆಂದು ಸಧ್ಯಕ್ಕೆ ತಿಳಿದು ಬಂದಿಲ್ಲ. ವ್ಯಕ್ತಿಯ ಕುರಿತು ಮಾಹಿತಿ ಸಿಕ್ಕಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !