ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಇನ್ಮುಂದೆ ಲಗೇಜ್‌ಗೂ (Luggage) ಹೊಸ ದರ ನಿಗದಿ ಮಾಡಲಾಗಿದೆ.
ಗರಿಷ್ಠ 30 ಕೆಜಿ ಮೇಲೆ ಲಗೇಜ್ ಇದ್ದರೆ ಕಡ್ಡಾಯವಾಗಿ ಹಣವನ್ನು ಪಾವತಿ ಮಾಡಲೇಬೇಕಾಗುತ್ತದೆ. ನಾಯಿಯನ್ನ ಚೈನಿನಲ್ಲಿ ಬಿಗಿದು ಕಾಳಜಿಯೊಂದಿಗೆ ಬಸ್ಸಿನಲ್ಲಿ ಸಾಗಿಸಬಹುದು. ವಯಸ್ಕರು 30 ಕೆಜಿ, ಮಕ್ಕಳು 15 ಕೆಜಿ ತೂಕದ ಲಗ್ಗೇಜ್ ಬಸ್ಸಿನಲ್ಲಿ ಕೊಂಡೊಯ್ಯಬಹುದು.
ಈಗ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್ನಲ್ಲಿ ತಮ್ಮ ಜೊತೆಗೆ ವೈಯಕ್ತಿಕ ಲಗೇಜ್ ಮಾತ್ರವಲ್ಲದೆ, ಫ್ರಿಡ್ಜ್, ವಾಷಿಂಗ್ ಮಿಷಿನ್, ಕಬ್ಬಿಣದ ಪೈಪ್‌ಗಳು, ಟೈರ್‌ಗಳು, ಮತ್ತು ಪ್ರಾಣಿ-ಪಕ್ಷಿಗಳನ್ನೂ ಸಾಗಿಸಲು ಅವಕಾಶವನ್ನು ನೀಡಲಾಗಿದೆ. ಈ ಹೊಸ ನಿಯಮಗಳು ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯವನ್ನು ಒದಗಿಸುವ ಜೊತೆಗೆ, ಸಾರಿಗೆ ನಿಗಮಕ್ಕೆ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ.
ಪ್ರಯಾಣಿಕರು 4 ಅಥವಾ 5 ಜನರ ಗುಂಪಿನಲ್ಲಿ ಪ್ರಯಾಣಿಸುತ್ತಿದ್ದು. ಒಂದು ಬ್ಯಾಗ್ ಅಥವಾ ಬಂಡಲ್ ಲಗೇಜ್ ಕೊಂಡೊಯ್ಯುತ್ತಿದ್ದಲ್ಲಿ ಉಚಿತ ಸಾಗಣೆಯು ಒಬ್ಬ ಪ್ರಯಾಣಿಕರಿಗೆ ಮಾತ್ರ (30 ಕೆಜಿ) ಅನ್ವಯಿಸುತ್ತದೆ. ಒಬ್ಬರು ಮಾತ್ರ ಉಚಿತವಾಗಿ ಲಗೇಜ್ ಕೊಂಡೊಯ್ಯಬಹುದು.
ಪ್ರಯಾಣಿಕರು ಲಗೇಜ್ ಅನ್ನ ಸರಿಯಾಗಿ ತೂಕ ಮಾಡಿಸಿಕೊಂಡು ಬರಬೇಕಾಗುತ್ತದೆ. ಯಂತ್ರದ ತೂಕವಿಲ್ಲದಿದ್ದರೆ ಅಂದಾಜು ತೂಕದ ಲಗೇಜ್ ಅನ್ನು ಪರಿಗಣಿಸಲಾಗುತ್ತದೆ.
ಎಸಿ ಮತ್ತು ನಾನ್ ಎಸಿ ಬಸ್ಸುಗಳಿಗೆ ಪ್ರತ್ಯೇಕ ದರವನ್ನು ನಿಗದಿ ಮಾಡಲಾಗಿದೆ. ನಾನ್ ಎಸಿ ಬಸ್ಸುಗಳಿಗೆ 1-5 ಹಂತದವರೆಗೆ 5 ರೂ. ದರ ನಿಗದಿ ಆಗಿದ್ದರೆ ಎಸಿ ಬಸ್ಸುಗಳಲ್ಲಿ 10 ರೂ. ದರವನ್ನು ನಿಗದಿ ಮಾಡಲಾಗಿದೆ. 51 ರಿಂದ 55 ಹಂತದವರೆಗಿನ ನಾನ್ ಎಸಿ ಬಸ್ಸುಗಳಿಗೆ 44 ರೂ., ನಾನ್ ಎಸಿ ಬಸ್ಸುಗಳಿಗೆ 55 ರೂ. ದರವನ್ನು ನಿಗದಿ ಮಾಡಲಾಗಿದೆ.
ಸಾಕು ಪ್ರಾಣಿಗಳನ್ನು ಉಚಿತವಾಗಿ ಪ್ರಯಾಣಿಸಲು ಅನುಮತಿ ಇಲ್ಲ. ನಾಯಿಯನ್ನು ಒಬ್ಬ ವಯಸ್ಕ ಪ್ರಯಾಣಿಕರಂತೆ ಪರಿಗಣಿಸಿ ದರ ವಿಧಿಸಿದ್ದರೆ ಮೊಲ, ನಾಯಿ ಮರಿ, ಬೆಕ್ಕು, ಪಂಜರದಲ್ಲಿರುವ ಪಕ್ಷಿಗೆ ಮಕ್ಕಳದ ದರವನ್ನು ವಿಧಿಸಲಾಗುತ್ತದೆ. ರೇಷ್ಮೆ ಗೂಡನ್ನು ಪ್ರತಿ 15 ಕೆಜಿಗೆ 1 ಯೂನಿಟ್‌ನಂತೆ ಪರಿಗಣಿಸಲಾಗುತ್ತದೆ.