ಪ್ರಯಾಣಿಕರೇ ದಯವಿಟ್ಟು ಗಮನಿಸಿ.. ನೇರಳೆ ಮಾರ್ಗದಲ್ಲಿ ಇಂದಿನಿಂದ ನಾಲ್ಕು ದಿನ ಮೆಟ್ರೋ ಸಂಚಾರ ಇಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೆಟ್ರೋದಲ್ಲಿ ಪ್ರಯಾಣಿಸುವವರಿಗೆ ಇದು ಪ್ರಮುಖ ಸುದ್ದಿಯಾಗಿದೆ. ಇಂದಿನಿಂದ ನಾಲ್ಕು ದಿನಗಳವರೆಗೆ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ನೇರಳೆ ಮಾರ್ಗದಲ್ಲಿ ಬೆಳಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ರೈಲು ಸಂಚಾರ ಸ್ಥಗಿತವಾಗಲಿದೆ. ಬೈಯಪ್ಪನಹಳ್ಳಿಯಿಂದ ಕೆಆರ್‌ಪುರಂ ಮೆಟ್ರೋ ನಿಲ್ದಾಣದವರೆಗೆ ಸೇವೆ ವಿಸ್ತರಿಸಲು ಇಂದಿನಿಂದ ಆ.೧೪ರವರೆಗೆ ಮೆಟ್ರೋ ರೈಲು ಸೇವೆ ಇರುವುದಿಲ್ಲ.

ಸಿಗ್ನಲಿಂಗ್ ಹಾಗೂ ಇತರ ಕಾಮಗಾರಿಗಳಿಗಾಗಿ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ಕಾರಣಕ್ಕಾಗಿ ರೈಲು ಸೇವೆಯನ್ನು ಎರಡು ಗಂಟೆಗಳ ಕಾಲ ನಿಲ್ಲಿಸಲಾಗಿದೆ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!