May 5, 2026
Tuesday, May 5, 2026
spot_img

ವಿಮಾನದೊಳಗೆ ಹೊತ್ತಿ ಉರಿದ ಪ್ರಯಾಣಿಕನ ಪವರ್ ಬ್ಯಾಂಕ್: ಚಂಡೀಗಢದಲ್ಲಿ ತುರ್ತು ಲ್ಯಾಂಡಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೈದರಾಬಾದ್‌ನಿಂದ ಚಂಡೀಗಢಕ್ಕೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ.

ಈ ಘಟನೆಯು ಚಂಡೀಗಢದಲ್ಲಿ ವಿಮಾನ ಲ್ಯಾಂಡ್ ಆದ ಬಳಿಕ ನಡೆದಿದ್ದು, ತಕ್ಷಣವೇ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತರಾಗಿ ಸ್ಥಳಾಂತರಿಸಲಾಯಿತು.

ಇಂಡಿಗೋ ವಿಮಾನ 6E 108 ರಲ್ಲಿ 198 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಗಳು ಹೈದರಾಬಾದ್‌ನಿಂದ ಚಂಡೀಗಢಕ್ಕೆ ಪ್ರಯಾಣಿಸುತ್ತಿದ್ದರು.

ಈ ಕುರಿತು ಇಂಡಿಗೋ ವಿಮಾನಯಾನ ಸಂಸ್ಥೆ ಮಾಹಿತಿ ನೀಡಿದ್ದು, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ಸ್ಥಳಾಂತರಗೊಳಿಸಲಾಯಿತು. ಎಲ್ಲರನ್ನು ಸುರಕ್ಷಿತವಾಗಿ ಟರ್ಮಿನಲ್‌ಗೆ ಸ್ಥಳಾಂತರಿಸಲಾಗಿದೆ. ಇಂಡಿಗೋದಲ್ಲಿ ಗ್ರಾಹಕರ ಮತ್ತು ಸಿಬ್ಬಂದಿಯ ಸುರಕ್ಷತೆಯು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !