Tuesday, August 16, 2022

Latest Posts

ಕೊರೋನಾದಿಂದ ಕುಂಠಿತಗೊಂಡ ಪ್ರಯಾಣಿಕರ ಪ್ರಮಾಣ: BMTC ಟಿಕೆಟ್ ದರ ಏರಿಕೆಗೆ ಚಿಂತನೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಬಳಿಕ ಪ್ರಯಾಣಿಕರ ಪ್ರಮಾಣ ಇಳಿಮುಖವಾಗುತ್ತಿದ್ದು, ಇತ್ತ ಡೀಸೆಲ್ ಬೆಲೆ ಕಳೆದ ವರ್ಷಕ್ಕಿಂತ 30 ರೂಪಾಯಿ ಹೆಚ್ಚಳವಾಗಿದೆ. ಹೀಗಾಗಿ ಬಿಎಂಟಿಸಿ ದರ ಹೆಚ್ಚಳ ಅನಿವಾರ್ಯ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸಿ. ಶಿಖಾ ಹೇಳಿದ್ದಾರೆ.
ದರ ಹೆಚ್ಚಳ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಬಜೆಟ್ ನಲ್ಲಿ ನಿರ್ಧಾರ ಹೊರಬರುವ ಸಾಧ್ಯತೆಯಿದೆ. ಕೊರೋನಾ ಬಳಿಕ 10 ಲಕ್ಷ ಪ್ರಯಾಣಿಕರ ಸಂಖ್ಯೆ ಕುಸಿತವಾಗಿದೆ. ಬಿಎಂಟಿಸಿ ಸಂಸ್ಥೆ ಕೊರೋನಾ ಕಾರಣದಿಂದ ಆರ್ಥಿಕ ಸಂಕಷ್ಟದಲ್ಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ಹೇಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss