Wednesday, October 29, 2025

ಪ್ರಯಾಣಿಕರೇ ಗಮನಿಸಿ…ಬೆಂಗಳೂರು-ಮಂಗಳೂರು ನಡುವೆ ಈ ರೈಲುಗಳ ಸಂಚಾರ ಬಂದ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಹಾಗೂ ಮಂಗಳೂರು ಸಂಪರ್ಕಿಸುವ ರೈಲು ಮಾರ್ಗದ ಸಕಲೇಶಪುರ ಹಾಗೂ ಸುಬ್ರಹ್ಮಣ್ ರೋಡ್ ಘಾಟ್ ಸೆಕ್ಷನ್‌ನಲ್ಲಿ ರೈಲ್ವೇ ಕಾಮಗಾರಿ ಆರಂಭಗೊಳ್ಳುತ್ತಿದೆ. ಈ ಭಾಗದಲ್ಲಿ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ ನವೆಂಬರ್ 2 ರಿಂದ ಆರಂಭಗೊಳ್ಳುತ್ತಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಹಲವು ರೈಲು ಸೇವೆ ರದ್ದಾಗುತ್ತಿದೆ. ಈ ಕುರಿತು ನೈರುತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ.

ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ ಹಿನ್ನಲೆಯಲ್ಲಿ ಬೆಂಗಳೂರು-ಮಂಗಳೂರು ರೈಲ್ವೇ ಸೇವೆಯಲ್ಲಿ ವ್ಯತ್ಯಯವಾಗುತ್ತಿದೆ. ನವೆಂಬರ್ 2 ರಿಂದ ಕಾಮಗಾರಿ ಆರಂಭಗೊಳ್ಳಲಿದೆ. ಡಿಸೆಂಬರ್ 15ರ ವರೆಗೆ ಕಾಮಗಾರಿ ನಡೆಯಲಿದೆ. ಹೀಗಾಗಿ ಈ ಸಮಯದಲ್ಲಿ ಹಲವು ರೈಲು ಸಂಚಾರ ರದ್ದಾಗುತ್ತಿದೆ. ಪ್ರತಿ ದಿನ ನಾಲ್ಕು ಗಂಟೆಗಳ ಕಾಲ ಲೈನ್ ಬ್ಲಾಕ್ ತೆರೆದುಕೊಳ್ಳಲಿದೆ.

ಯಾವ ರೈಲು ಸೇವೆ ರದ್ದು?

  1. ರೈಲು ಸಂಖ್ಯೆ 16539 ಯಶವಂತಪುರ–ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 08.11.2025 ರಿಂದ 13.12.2025 ರವರೆಗೆ ರದ್ದುಗೊಳ್ಳಲಿದೆ.
  2. ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 02.11.2025 ರವರೆಗೆ ರದ್ದುಗೊಂಡಿತ್ತು. ಈಗ 09.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ.
  3. ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈನ್-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರವರೆಗೆ ರದ್ದುಗೊಂಡಿತ್ತು. ಈಗ 02.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ.
  4. ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್–ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.
  5. ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 31.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.
  6. ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 04.11.2025 ರಿಂದ 16.12.2025 ರವರೆಗೆ ರದ್ದುಗೊಳ್ಳಲಿದೆ.

ಮಂಗಳೂರು-ಬೆಂಗಳೂರು ಬೆಳಗಿನ ರೈಲು ರದ್ದು ವಿಸ್ತರಣೆ
ಭಾರಿ ಮಳೆಯ ಕಾರಣ ರದ್ದಾಗಿದ್ದ ಮಂಗಳೂರು ಬೆಂಗಳೂರು ಬೆಳಗಿನ ರೈಲುಗಳ ರದ್ದು ನಿರ್ಧಾರವನ್ನು ಕಳೆದ ತಿಂಗಳು ವಿಸ್ತರಣೆ ಮಾಡಲಾಗಿದೆ. ವಿದ್ಯುದ್ದೀಕರಣ ಕಾಮಗಾರಿ ಹಿನ್ನಲೆಯಲ್ಲಿ ಈ ರೈಲು ಸಂಚಾರವನ್ನು ಡಿಸೆಂಬರ್ 16ರ ವರೆಗೆ ರದ್ದು ಮಾಡಲಾಗಿದೆ.

error: Content is protected !!