March 27, 2026
Friday, March 27, 2026
spot_img

ಪ್ರಯಾಣಿಕರೇ ಗಮನಿಸಿ: ನಿಮ್ಮೂರಿನ ರಸ್ತೆಗೆ ಬರಲಿವೆ ಸಾವಿರಾರು ಹೊಸ ಡೀಸೆಲ್ ಬಸ್ಸುಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಸಾರ್ವಜನಿಕ ಸಾರಿಗೆಯನ್ನು ಬಲಪಡಿಸಲು ಸರ್ಕಾರ ಭರ್ಜರಿ ಕ್ರಮ ಕೈಗೊಂಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ಸಾರಿಗೆ ನಿಗಮಗಳಿಗೆ ಹೊಸ ಬಸ್ಸುಗಳ ಸೇರ್ಪಡೆ ಕಾರ್ಯ ಭರದಿಂದ ಸಾಗಿದೆ.

ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಿದಂತೆ 2,000 ಹೊಸ ಡೀಸೆಲ್ ಬಸ್ಸುಗಳನ್ನು ನೇರ ಖರೀದಿ ಮೂಲಕ ಒದಗಿಸಲು ಈಗಾಗಲೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಕಳೆದ ಮೂರು ವರ್ಷಗಳಲ್ಲಿ ಸಾರಿಗೆ ನಿಗಮಗಳ ಬಲವರ್ಧನೆಗಾಗಿ ಒಟ್ಟಾರೆ 6,596 ಬಸ್ಸುಗಳನ್ನು ಒದಗಿಸಿ ದಾಖಲೆ ಬರೆಯಲಾಗಿದೆ.

ಸಾರಿಗೆ ಸೇವೆಯನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ 2026-27ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 1,000 ಡೀಸೆಲ್ ಬಸ್ಸುಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !