ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ನ ಅಮೃತಸರ ಗ್ರಾಮಾಂತರ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ, ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ನೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಸೇನಾ ಸಿಬ್ಬಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಅಮೃತಸರದಲ್ಲಿ ನೆಲೆಸಿದ್ದು, ಪಾಕಿಸ್ತಾನದ ಗುಪ್ತಚರ ವಿಭಾಗದ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ. ಅವರು ವಾಟ್ಸಾಪ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು ಎಂದು ಮೂಲಗಳು ವರದಿ ಮಾಡಿವೆ.
ಕೇಂದ್ರ ಭದ್ರತಾ ಏಜೆನ್ಸಿಗಳು ಹಂಚಿಕೊಂಡ ಮಾಹಿತಿ ಆಧರಿಸಿ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಸೇನಾ ಸಿಬ್ಬಂದಿಯನ್ನು ಬಂಧಿಸಲು ಪೋಲೀಸರು ತೆರಳಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.