ಪಠಾಣ್‌ಕೋಟ್ ದಾಳಿಯ ಮಾಸ್ಟರ್‌ಮೈಂಡ್ ಶಾಹಿದ್‌ ಲತೀಫ್‌ಗೆ ಗುಂಡಿಕ್ಕಿ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಠಾಣ್‌ಕೋಟ್ ದಾಳಿಯ ಮಾಸ್ಟರ್‌ಮೈಂಡ್ ಹಾಗೂ ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್‌ ಪಾಕಿಸ್ತಾನದಲ್ಲಿ ಹತನಾಗಿದ್ದಾನೆ. ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಇಂದು ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಲತೀಫ್‌ ಸಾವನ್ನಪ್ಪಿದ್ದಾನೆ.

41 ವರ್ಷದ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಸದಸ್ಯ. 2016ರ ಜನವರಿ 2ರಂದು ನಡೆದ ಪಠಾಣ್‌ಕೋಟ್ ದಾಳಿಯ ಪ್ರಮುಖ ಸಂಚುಕೋರನಾಗಿದ್ದವನು. ಲತೀಫ್ ಸಿಯಾಲ್‌ಕೋಟ್‌ನಿಂದ ದಾಳಿಯನ್ನು ಸಂಘಟಿಸಿದ್ದು ಮಾತ್ರವಲ್ಲದೆ ಅದನ್ನು ಕಾರ್ಯಗತಗೊಳಿಸಲು ನಾಲ್ಕು ಜೆಇಎಂ ಭಯೋತ್ಪಾದಕರನ್ನು ಪಠಾಣ್‌ಕೋಟ್‌ಗೆ ಕಳುಹಿಸಿದ್ದ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನೆಯ ಆರೋಪದ ಮೇಲೆ ಲತೀಫ್‌ನನ್ನು ಭಾರತ 1994 ನವೆಂಬರ್‌ನಲ್ಲಿ ಬಂಧಿಸಿ ಜೈಲಿನಲ್ಲಿರಿಸಿತ್ತು. ಭಾರತದಲ್ಲಿ ಶಿಕ್ಷೆ ಅನುಭವಿಸಿದ ನಂತರ, 2010 ರಲ್ಲಿ ವಾಘಾ ಮೂಲಕ ಪಾಕಿಸ್ತಾನಕ್ಕೆ ಗಡೀಪಾರು ಮಾಡಲಾಯಿತು.

ವಿಮಾನ ಅಪಹರಣ ಪ್ರಕರಣದಲ್ಲೂ ಲತೀಫ್ ವಿರುದ್ಧ ಆರೋಪ

1999ರಲ್ಲಿ ಇಂಡಿಯನ್ ಏರ್ ಲೈನ್ಸ್ ವಿಮಾನ ಅಪಹರಣ ಪ್ರಕರಣದಲ್ಲೂ ಲತೀಫ್ ಪ್ರಮುಖ ಆರೋಪಿಯಾಗಿದ್ದ. ಪಾಕ್‌ಗೆ ತೆರಳಿದ ಬಳಿಕ ಲತೀಫ್‌ ಜಿಹಾದಿಗಳ ಗುಂಪು ಸೇರಿದನೆಂದು ಎನ್‌ಐಎ ತನಿಖೆಯಿಂದ ತಿಳಿದುಬಂದಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!