Wednesday, August 10, 2022

Latest Posts

ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯ-ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ರೋಗಿಗಳು ಹೈರಾಣ!

ಹೊಸದಿಗಂತ ವರದಿ,ಮಂಗಳೂರು:

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿನ ವೈದ್ಯರ ಮತ್ತು ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯತನದ ಬಗ್ಗೆ ಕಾರ್ಕಳದ ರೋಗಿಯೊಬ್ಬರ ಮನೆಯವರು ಮಂಗಳವಾರ ಆಸ್ಪತ್ರೆಯ ಮುಂಭಾಗವೇ ಪ್ರತಿಭಟಿಸಿದ್ದಾರೆ. ಸ್ಥಳಕ್ಕೆ ಬಂದ ಶಾಸಕರು ಮತ್ತು ಮಾಧ್ಯಮದ ಮುಂದೆ ಆಸ್ಪತ್ರೆಯಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟಿದ್ದಾರೆ. ಆಸ್ಪತ್ರೆಯ ನಿರ್ಲಕ್ಷ್ಯದಿಂದಾಗಿ ಪತ್ನಿಯನ್ನು ಕಳೆದುಕೊಳ್ಳಬೇಕಾಯಿತು. ಇಂತಹ ಸ್ಥಿತಿ ಯಾರಿಗೂ ಬರಬಾರದು ಎಂದು ಕಾಸರಗೋಡಿನ ವ್ಯಕ್ತಿಯೊಬ್ಬರು ನೋವನ್ನು ತೋಡಿಕೊಂಡಿದ್ದಾರೆ.
ಸೋಮವಾರ ಸಂಜೆ ಕಾಸರಗೋಡು ಪೆರ್ಮುದೆಯ ಸುಶೀಲ(೫೫) ಎಂಬವರನ್ನು ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಆಂಬ್ಯುಲೆನ್ಸ್ ಮೂಲಕ ವೆನ್ಲಾಕ್‌ಗೆ ಕರೆತರಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಅವರು ಆಸ್ಪತ್ರೆಯ ನಿರ್ಲಕ್ಷ್ಯದಿಂದ ಸಾವನ್ನಪ್ಪುವಂತಾಗಿದೆ ಎಂದು ಆಸ್ಪತ್ರೆಯ ವಾಸ್ತವ ಸ್ಥಿತಿಯನ್ನು ವಿವರಿಸಿದ್ದಾರೆ ಮೃತ ಸುಶೀಲ ಅವರ ಪತಿ ಕೃಷ್ಣ ಟೈಲರ್ ಪೆರ್ಮುದೆ.
ಕಾರ್ಕಳ ತಾಲೂಕಿನ ವರಂಗ ಎಂಬಲ್ಲಿನ ನಿವಾಸಿ ರಮೇಶ್ ಕುಮಾರ್ ಅವರು ಬಿದ್ದು ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಅವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನೀಡಿದ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್‌ಗೆ ಹೋಗಲು ತಿಳಿಸಿದ್ದರಿಂದ ಭಾನುವಾರ(ಅ.೨೪) ರಮೇಶ್ ಕುಮಾರ್ ಅವರನ್ನು ವೆನ್ಲಾಕ್‌ಗೆ ಕರೆತರಲಾಗಿತ್ತು. ಮಧ್ಯಾಹ್ನ ೧ ಗಂಟೆಯ ವೇಳೆಗೆ ವೆನ್ಲಾಕ್‌ಗೆ ಬಂದಿದ್ದರೂ ಆಸ್ಪತ್ರೆಯ ಸಿಬ್ಬಂದಿಗಳು ಸರಿಯಾಗಿ ಸ್ಪಂದಿಸಿಲ್ಲ. ೬ ಗಂಟೆಯ ವೇಳೆಗೆ ಬೆಡ್ ಒದಗಿಸಿದ್ದಾರೆ ಎಂದು ರಮೇಶ್ ಕುಮಾರ್ ಅವರ ಪತ್ನಿ ಅಳಲು ತೋಡಿಕೊಂಡಿದ್ದಾರೆ.
ವೆನ್ಲಾಕ್ ಆಸ್ಪತ್ರೆಯೊಳಗಿನ ಅವ್ಯವಸ್ಥೆಯ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಶಾಸಕ ವೇದವ್ಯಾಸ ಕಾಮತ್ ಅವರು ಖುದ್ದಾಗಿ ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳು ಮತ್ತು ರೋಗಿಗಳ ಮನೆಯವರಿಂದ ಮಾಹಿತಿ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss