ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಟ್ನಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಆತಂಕದ ಮನೆ ಮಾಡಿದೆ.
ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪಾಟ್ನಾ ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.
ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ಪಾಟ್ನಾ ವಿಮಾನ ನಿಲ್ದಾಣ ನಿರ್ದೇಶನಾಲಯ ತಿಳಿಸಿದ ಬೆನ್ನೆಲ್ಲೇ ಬಿಹಾರದ ಪಾಟ್ನಾದ ಜಯಪ್ರಕಾಶ್ ನಾರಾಯಣ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.