ಬಿಹಾರದಲ್ಲಿ ಜಾತಿ ಆಧಾರಿತ ಸಮೀಕ್ಷೆಗೆ ಪಾಟ್ನಾ ಹೈಕೋರ್ಟ್ ತಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಹಾರದಲ್ಲಿ ಜಾತಿ ಆಧಾರಿತ ಸಮೀಕ್ಷೆಗೆ ಮುಂದಾಗಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರಕ್ಕೆ ಹೈಕೋರ್ಟ್ ತಡೆ ನೀಡಿದೆ.

ಹಿಂದುಳಿದವರಿಗೆ ಸಹಾಯ ಮಾಡುವ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದ ಬಿಹಾರ ಸರ್ಕಾರದ ಜಾತಿ ಆಧಾರಿತ ಸಮೀಕ್ಷೆಯನ್ನು ನಡೆಸದಂತೆ ಇಂದು ಪಾಟ್ನಾ ಹೈಕೋರ್ಟ್ ತಡೆಯಾಜ್ಞೆ ಕೊಟ್ಟಿದೆ.

ನಿತೀಶ್ ಕುಮಾರ್ ಅವರ ಸರ್ಕಾರ ಇಂದು ಬೆಳಿಗ್ಗೆ ಜಾತಿ ಆಧಾರಿತ ಸಮೀಕ್ಷೆಯನ್ನು ಸಮರ್ಥಿಸಿಕೊಂಡಿದ್ದರು, ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳು ಅದರ ಅನುಷ್ಠಾನವನ್ನು ಬೆಂಬಲಿಸುತ್ತವೆ ಎಂದು ವಾದ ಮಂಡಿಸಿದರು. ಬಿಹಾರ ನಿವಾಸಿಗಳ ಆರ್ಥಿಕ ಸ್ಥಿತಿ ಮತ್ತು ಜಾತಿ ಎರಡರಲ್ಲೂ ದತ್ತಾಂಶವನ್ನು ಸಂಗ್ರಹಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ, ಇದು ಕೇಂದ್ರಕ್ಕೆ ಮಾತ್ರ ಇರುವುದು.

ಸಮೀಕ್ಷೆಯ ವಿರೋಧದ ಬಗ್ಗೆ ನಿತೀಶ್ ಕುಮಾರ್ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ, ಅಗತ್ಯವಿರುವವರಿಗೆ ಇದು ಉತ್ತಮ ಯೋಜನೆಯಾಗಿದೆ. ಬಡವರ ಸಹಾಯಕ್ಕೆ ಈ ಕ್ರಮವನ್ನು ತರಲಾಗಿದೆ ಎಂದು ಅವರು ಹೇಳಿದರು.

ಈ ಸಮೀಕ್ಷೆಯು ಬಡವರನ್ನು ಸಮಾಜ ಮುಖ್ಯವಾಹಿನಿಗೆ ತರಲು ಅಗತ್ಯವಿರುವ ಪ್ರಮುಖ ಕ್ರಮ ಈ ಸಮೀಕ್ಷೆಯಾಗಿತ್ತು ಎಂದು ಹೇಳಿದರು.

ಬಿಹಾರದಲ್ಲಿ ಮೊದಲ ಸುತ್ತಿನ ಜಾತಿ ಸಮೀಕ್ಷೆಯು ಜನವರಿ 7 ಮತ್ತು 21ರ ನಡುವೆ ನಡೆದಿದ್ದು, ಎರಡನೇ ಸುತ್ತನ್ನು ಏಪ್ರಿಲ್ 15 ರಿಂದ ಮೇ 15 ರವರೆಗೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!