Wednesday, August 17, 2022

Latest Posts

ತಮಿಳುನಾಡು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ : ಎನ್‌ಐಎ ತನಿಖೆಗೆ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ.
ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಎನ್‌ಐಎ ತನಿಖೆಗೆ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ  ಆಗ್ರಹಿಸಿದ್ದಾರೆ.

ಇದರ ಹಿಂದೆ ದೊಡ್ಡ ಪಿತೂರಿ ಇದೆ. ಈಗಾಗಲೇ ಆರೋಪಿಯೊಬ್ಬನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಬೈಕ್‌ನಲ್ಲಿ ದುಷ್ಕರ್ಮಿಗಳು ಬಂದು ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಬಾಂಬ್ ಎಸೆದು ಹೋಗಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಚೆನ್ನೈನ ವಿನೋದ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!