ಹೊಸದಿಗಂತ ಡಿಜಿಟಲ್ ಡೆಸ್ಕ್
ತುಮಕೂರು ಜಿಲ್ಲೆ ಪಾವಗಡ ಬಸ್ ದುರಂತ ಪ್ರಕರಣವನ್ನುಗಂಭೀರವಾಗಿ ಪರಿಗಣಿಸಿದ್ದು, ಆ ಮಾರ್ಗದಲ್ಲಿನ ಖಾಸಗಿ ಬಸ್‌ಗಳ ಪರವಾನಿಗೆ ರದ್ದುಪಡಿಸಿ ಕೆಎಸ್ಆರ್‌ಟಿಸಿ ಬಸ್‌ಗಳ ಸಂಚಾರಕ್ಕೆ ಕ್ರಮಕೈಗೊಳ್ಳಲಾಗುತ್ತದೆ ಮತ್ತು ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಶೂನ್ಯವೇಳೆ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಾಜೇಂದ್ರ ರಾಜಣ್ಣ ಪ್ರಶ್ನೆಗೆ ಉತ್ತರಿಸಿದ ಸಚಿವರು, ಖಾಸಗಿ ಬಸ್ ದುರಂತದಲ್ಲಿ 6 ಮಂದಿ ಸಾವಿಗೀಡಾಗಿದ್ದು, 43 ಮಂದಿಗೆ ಗಾಯಗಳಾಗಿವೆ.ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.ನಾನು ತೆರಳುವ ಮುನ್ನವೇ ಅಧಿಕಾರಿಗಳನ್ನು ಕಳಿಸಿ ಪ್ರಾಥಮಿಕ ವರದಿ ಪಡೆದಿದ್ದೇನೆ ಎಂದರು..
ಸ್ಥಳದಲ್ಲಿ ಅಪಘಾತವಾಗಿ ಎರಡು ಬಸ್ ಸೀಜ್ ಆಗಿ ಪೊಲೀಸ್ ಠಾಣೆಯಲ್ಲಿವೆ. ಹಾಗಾಗಿ, ಈ ಬಸ್ ಮೇಲೆ ಒತ್ತಡ ಆಗಿದೆ. ಓವರ್ ಲೋಡ್ ಆಗಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಫಿಟ್ನೆಸ್ ಸರ್ಟಿಫಿಕೇಟ್, ಪರ್ಮಿಟ್ ಎಲ್ಲ ನೋಡಿ ಪರಿಶೀಲನೆ ಮಾಡಲಾಗಿದೆ. ಕರ್ತವ್ಯ ಲೋಪದ ಆರೋಪದ ಮೇಲೆ ಆರ್‌ಟಿಒ ಅಮಾನತು ಮಾಡಿದ್ದೇನೆ ಎಂದರು.
ಈಗಾಗಲೇ ಅಲ್ಲಿ ಖಾಸಗಿ ಬಸ್ ಇವೆ, ಅದರ ಬದಲು 14 ಬಸ್‌ಗಳನ್ನು ನಮ್ಮ ನಿಗಮಗಳಿಂದ ಕೊಟ್ಟು 40 ಹೆಚ್ಚುವರಿ ಹಳ್ಳಿಗಳಿಗೆ 40-50 ಟ್ರಿಪ್‌ಗೆ ವ್ಯವಸ್ಥೆ ಮಾಡಲಾಗಿದೆ. ಮೃತರ ಕುಟುಂಬಗಳಿಗೆ 5 ಲಕ್ಷ ಸರ್ಕಾರದಿಂದ ಮತ್ತು ವೈಯಕ್ತಿಕವಾಗಿ 1 ಲಕ್ಷ ಪರಿಹಾರ ಕೊಡಲಾಗಿದೆ. ಗಾಯಾಳುಗಳಿಗೆ 50 ಸಾವಿರ ಪರಿಹಾರ ಕೊಡಲಾಗಿದೆ. ಆ ಮಾರ್ಗದಲ್ಲಿ ಖಾಸಗಿ ಬಸ್ ಪರವಾನಿಗೆ ರದ್ದುಪಡಿಸಿ, ಸರ್ಕಾರಿ ಬಸ್ ಓಡಿಸಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು
ಇನ್ನು ಖಾಸಗಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸಿದ ನಾಲ್ವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.