ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡಗೆ ಮತ್ತೆ ನಿರಾಸೆಯಾಗಿದ್ದು, ಅವರ ಮಧ್ಯಂತರ ಜಾಮೀನು ಅರ್ಜಿ ವಜಾ ಆಗಿದೆ.
ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಅವರು ಕೋರ್ಟ್ನಲ್ಲಿ ಕೋರಿದ್ದರು. ಆದರೆ, 57ನೇ ಸೆಷನ್ಸ್ ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿದೆ.
ಈ ಮೊದಲು ಪವಿತ್ರಾ ಅವರು ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದರು. ಜೈಲು ಊಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಹೇಳಿದ್ದರು. ಕೆಲ ದಿನ ಇದಕ್ಕೆ ಅವಕಾಶ ಇತ್ತು. ನಂತರ ಅದನ್ನು ರದ್ದು ಮಾಡಲಾಗಿತ್ತು.



