ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಎ1 ಆರೋಪಿ ಪವಿತ್ರಾ ಗೌಡ ಮನೆಯಲ್ಲಿ ಸಾಕ್ಷ್ಯಕ್ಕಾಗಿ ತೀವ್ರ ಶೋಧ ನಡೆಸಿದ್ದಾರೆ. ಈ ವೇಳೆ ಪ್ರಕರಣ ಸಂಬಂಧಿಸಿದ ಮಹತ್ವದ ಸಾಕ್ಷ್ಯಗಳು ಲಭ್ಯವಾಗಿದೆ. ರೇಣುಕಾಸ್ವಾಮಿ ಮೇಲೆ ಪವಿತ್ರಾ ಗೌಡ ಚಪ್ಪಲಿಯಲ್ಲಿ ಹಲ್ಲೆ ನಡೆಸಿದ್ದರು. ರೇಣುಕಾಸ್ವಾಮಿ ಮೇಲೆ ಹಲ್ಲೆಗೆ ಬಳಸಿದ್ದ ಚಪ್ಪಲಿಯನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಕೆಲ ಮಹತ್ವದ ಸಾಕ್ಷ್ಯಗಳನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಪವಿತ್ರಾ ಗೌಡ ಮನೆಯಲ್ಲಿ ಮಹಜರು ನಡೆಸಿದ್ದಾರೆ. ಇದೇ ವೇಳೆ ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಹತ್ಯೆ ನಡೆಸುವ ದಿನ ಪವಿತ್ರಾ ಗೌಡ ಧರಿಸಿದ್ದ ಬಟ್ಟೆ, ಶಾಲುನ್ನೂ ಪೊಲೀಸರು ವಶಪಡಿಸಿದ್ದಾರೆ.
ಸುಮಾರು 2 ಗಂಟೆಗೂ ಹೆಚ್ಚು ಕಾಲು ಪೊಲೀಸರು ಪವಿತ್ರಾ ಗೌಡ ಮನೆ ಶೋಧ ನಡೆಸಿದ್ದಾರೆ. ಹಲವು ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡಿರುವ ವಸ್ತುಗಳ ಕುರಿತು ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಶೋಧ ಕಾರ್ಯ ಮುಗಿಸಿದ ಪೊಲೀಸರು ಇದೀಗ ಪವಿತ್ರಾ ಗೌಡಳನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.