ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಂಗಾಪುರದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ಮಗ ಮಾರ್ಕ್ ಶಂಕರ್ ಅರೋಗ್ಯ ಈಗ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಭಾನುವಾರ ಹೇಳಿದ್ದಾರೆ.
‘ಸಿಂಗಾಪುರದಲ್ಲಿ ನಡೆದ ದುರದೃಷ್ಟಕರ ಘಟನೆಯ ನಂತರ ನನ್ನ ಮಗ ಶಂಕರ್ ಸ್ಥಿರವಾಗಿದ್ದಾನೆ ಮತ್ತು ಚೇತರಿಸಿಕೊಳ್ಳುತ್ತಿದ್ದಾನೆ. ಅವನು ಚೇತರಿಸಿಕೊಳ್ಳುವಂತೆ ಪ್ರಾರ್ಥನೆ, ಕಾಳಜಿ ಮತ್ತು ಬೆಂಬಲ ನೀಡಿದ ಎಲ್ಲರಿಗೂ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ’ ಎಂದು ಪವನ್ ಕಲ್ಯಾಣ್ ‘X’ ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 8 ರಂದು ಸಿಂಗಾಪುರದ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಬಾಲಕಿಯೊಬ್ಬರು ಮೃತಪಟ್ಟಿದ್ದರು ಮತ್ತು ಶಂಕರ್ ಸೇರಿದಂತೆ 20 ಮಂದಿ ಗಾಯಗೊಂಡಿದ್ದರು.