Friday, March 24, 2023

Latest Posts

CINEMA| ಕನ್ನಡದ ಇಬ್ಬರು ನಾಯಕರಲ್ಲಿ ಕ್ಷಮೆಯಾಚಿಸಿದ ಪವನ್‌ ಕಲ್ಯಾಣ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕನ್ನಡದ ಸ್ಟಾರ್ ಹೀರೋ ಉಪೇಂದ್ರ ಮತ್ತು ಕಿಚ್ಚ ಸುದೀಪ್ ಕಬ್ಜಾ ಚಿತ್ರದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ. ನಾಯಕಿಯಾಗಿ ಶ್ರಿಯಾ ನಟಿಸಿದ್ದು,  ಪ್ಯಾನ್ ಇಂಡಿಯಾ ಚಿತ್ರವಾಗಿ ದೊಡ್ಡ ಮಟ್ಟದಲ್ಲಿ ಚಿತ್ರೀಕರಿಸಲಾಗಿದೆ. ಮಾರ್ಚ್ 17 ರಂದು ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿಯೂ ಈ ಚಿತ್ರ ಬಿಡುಗಡೆಯಾಗಲಿದೆ. ಸದ್ಯ ಚಿತ್ರತಂಡ ಪ್ರಚಾರದಲ್ಲಿ ನಿರತವಾಗಿದೆ.

ಇತ್ತೀಚೆಗೆ ಕಬ್ಜಾ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಪವನ್ ಕಲ್ಯಾಣ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಪವನ್ ಕಲ್ಯಾಣ್ ಜನಸೇನಾ ಪಕ್ಷದ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದರಿಂದ ಈ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಬರಲಾಗದಿದ್ದಕ್ಕೆ ವಿಷಾದವಿದೆ ಎಂದು ಪವನ್ ಅಧಿಕೃತವಾಗಿ ಪ್ರೆಸ್ ನೋಟ್ ಬಿಡುಗಡೆ ಮಾಡಿದ್ದಾರೆ.

ಈ ಪತ್ರಿಕಾ ಟಿಪ್ಪಣಿಯಲ್ಲಿ ನನ್ನನ್ನು ಕಬ್ಜಾ ಚಿತ್ರದ ಆಡಿಯೋ ಬಿಡುಗಡೆಗೆ ಅತಿಥಿಯಾಗಿ ಆಹ್ವಾನಿಸಲಾಗಿದೆ. ಆದರೆ ಪೂರ್ವ ನಿಗದಿತ ಜನಸೇನೆ ಪಕ್ಷದ ಚಟುವಟಿಕೆಗಳಿಂದಾಗಿ ಈ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂದು ವಿಷಾದಿಸುತ್ತೇನೆ. ನಾಯಕರಾಗಿ ನಟಿಸಿರುವ ಉಪೇಂದ್ರ ಮತ್ತು ಸುದೀಪ್ ಅವರಿಗೆ ಶುಭ ಹಾರೈಕೆಗಳು. ಇವರಿಬ್ಬರೂ ಬೇರೆ ಭಾಷೆಯಲ್ಲೂ ನಟಿಸಿ ಹೆಸರುವಾಸಿಯಾಗಿದ್ದಾರೆ. ಈ ಚಿತ್ರ ಯಶಸ್ವಿಯಾಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ನಿರ್ದೇಶಕ ಚಂದ್ರು, ನಿರ್ಮಾಪಕ ರಾಮಚಂದ್ರಗೌಡ ಹಾಗೂ ಉಳಿದ ಚಿತ್ರತಂಡದವರು ನನ್ನ ಅಭಿನಂದನೆಗಳು ಎಂದು ಪೋಸ್ಟ್ ಮಾಡಿದ್ದಾರೆ. ಪವನ್ ಕಲ್ಯಾಣ್ ಬಿಡುಗಡೆ ಮಾಡಿರುವ ಈ ಪ್ರೆಸ್ ನೋಟ್ ವೈರಲ್ ಆಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!