ರಾಜ್ಯ ಚುನಾವಣಾ ಅಖಾಡಕ್ಕೆ ಪವನ್ ಕಲ್ಯಾಣ್ ಎಂಟ್ರಿ: ಚಿಕ್ಕಬಳ್ಳಾಪುರದಲ್ಲಿ ಕೆ. ಸುಧಾಕರ್ ಪರ ಪ್ರಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಲೋಕಸಭೆ ಚುನಾವಣೆ ಪ್ರಚಾರಕ್ಕೆ ನಟ ಪವನ್ ಕಲ್ಯಾಣ್ ಎಂಟ್ರಿಕೊಡಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ತಮ್ಮ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಪವನ್ ಕಲ್ಯಾಣ್ ಅವರ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಅವರ ಶೆಡ್ಯೂಲ್ ನೋಡಿಕೊಂಡು ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಏಪ್ರಿಲ್ 18ರಂದು ಸಂಜೆ 5 ಗಂಟೆಗೆ ಚಿಕ್ಕಬಳ್ಳಾಪುರದಲ್ಲಿ ಪವನ್ ಕಲ್ಯಾಣ್ ಸುಧಾಕರ್ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್ 20ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರ ಸಮೀಪದ ಅಲಗುರ್ಕಿ ಬಳಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಲಕ್ಷಾಂತರ ಜನ ಭಾಗವಹಿಸಲಿದ್ದಾರೆ ಕಾರ್ಯಕ್ರಮದ ಸಿದ್ಧತೆ ಈಗಾಗಲೇ ಆರಂಭವಾಗಿದೆ. ಬೃಹತ್ ವೇದಿಕೆ ನಿರ್ಮಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!