ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಕರಣವೊಂದರ ಆರೋಪಿಯನ್ನು ಬಚಾವ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನ ಗೋವಿಂದ ಪುರ ಮಹಿಳಾ ಪಿಎಎಸ್ ಅನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.
ಗೋವಿಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಸಾವಿತ್ರಿ ಬಾಯಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಲಂಚ ಪಡೆದ ಆರೋಪದ ಮೇರೆಗೆ ಬಂಧಿಸಿದ್ದಾರೆ.
ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಲು ವ್ಯಕ್ತಿಯೊಬ್ಬರಿಂದ 1.25 ಲಕ್ಷ ರು. ಲಂಚ ಸ್ವೀಕರಿಸುವಾಗ ಮಹಿಳಾ ಪಿಎಸ್‌ಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಎಚ್‌ಬಿಆರ್ ಲೇಔಟ್ ನಿವಾಸಿ ಮೊಹಮ್ಮದ್ ಯೂನಸ್ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಸೋಮವಾರ ಲಂಚ ಸ್ವೀಕರಿಸುವಾಗ ಪಿಎಸ್‌ಐಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.