ಪೇ ಸಿಎಂ ಅಭಿಯಾನದ ಬಗ್ಗೆ ಕಾನೂನು ಕ್ರಮ: ಮುಖ್ಯಮಂತ್ರಿ ಬಸವರಾಜ್

ಹೊಸ ದಿಗಂತ ವರದಿ, ಚಿತ್ರದುರ್ಗ:

ಪೇ ಸಿಎಂ ಅಭಿಯಾನದ ಬಗ್ಗೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಪೇ ಸಿಎಂ ಅಭಿಯಾನ ವಿಚಾರವಾಗಿ ಕಾಂಗ್ರೆಸ್ ಪಕ್ಷದಿಂದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಇದು ಕಾಂಗ್ರೆಸ್ ನಾಯಕರ ನೈತಿಕ ಅಧಪತನ ತೋರುತ್ತಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ಧರಾಮಯ್ಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಪಿ.ಎಫ್.ಐ, ಎಸ್.ಡಿ.ಪಿ.ಐ ಕಚೇರಿ, ಮುಖಂಡರ ಮನೆ ಮೇಲೆ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿ, ಈಗಾಗಲೇ ಎನ್ ಐಎ, ರಾಜ್ಯ ಸರ್ಕಾರ ಕಾನೂನು ಕ್ರಮ ಕೈಗೊಂಡಿದೆ ಎಂದರು.

ಲಿಂಗಾಯತ ಸಿಎಂಗಳನ್ನೇ ಕಾಂಗ್ರೆಸ್ ಟಾರ್ಗೆಟ್ ಮಾಡುತ್ತಿದೆ ಎಂದು ಸಚಿವ ಡಾ.ಸುಧಾಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾನು ಅದರ ಭಾಗ ಅಲ್ಲ, ನಾನು ಪ್ರತಿಕ್ರಿಯಿಸಲ್ಲ ಎಂದು ಹೇಳಿದರು.

ಸಮೀಕ್ಷೆಗಳಲ್ಲಿ ಬಿಜೆಪಿ ಕಡಿಮೆ ಸಂಖ್ಯೆ ವಿಚಾರಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿ,
ಜನರ ನಾಡಿ ಮಿಡಿತ ನಮಗೂ ಗೊತ್ತಿದೆ. 35 ವರ್ಷ ನಾವೂ ರಾಜಕಾರಣ ಮಾಡಿದ್ದೇವೆ ಎಂದರು.

ದೆಹಲಿಗೆ ಹೋದಾಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಟರ ಜತೆ ಚರ್ಚಿಸಿ ಮುಂದುವರೆಯಲಾಗುವುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!