June 5, 2026
Friday, June 5, 2026
spot_img

PBKS vs MI | ಮುಂಬೈ ಈಗ ಬುಮ್ರಾ ಕೈಯಲ್ಲಿ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಅಚ್ಚರಿಯ ನಿರ್ಧಾರ ಕೈಗೊಂಡಿದೆ.

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ತಂಡದ ನಾಯಕತ್ವವನ್ನು ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾಗೆ ವಹಿಸಲಾಗಿದ್ದು, ಈ ಬೆಳವಣಿಗೆ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದೆ.

ಸತತ ಸೋಲುಗಳಿಂದ ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ತಂಡ ಇದೀಗ ಮುಂದಿನ ಸೀಸನ್‌ಗಾಗಿ ಹೊಸ ಯೋಜನೆ ರೂಪಿಸುತ್ತಿರುವ ಸೂಚನೆ ನೀಡಿದೆ.

ಇದನ್ನೂ ಓದಿ:

ನಾಯಕ ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದರೆ, ಕಳೆದ ಕೆಲವು ಪಂದ್ಯಗಳಲ್ಲಿ ತಂಡ ಮುನ್ನಡೆಸಿದ್ದ ಸೂರ್ಯಕುಮಾರ್ ಯಾದವ್ ವೈಯಕ್ತಿಕ ಕಾರಣಗಳಿಂದ ಲಭ್ಯರಿಲ್ಲ. ಈ ಹಿನ್ನೆಲೆ ಅನುಭವಿ ಬೌಲರ್ ಬುಮ್ರಾಗೆ ಮೊದಲ ಬಾರಿಗೆ ಐಪಿಎಲ್ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ.

2013ರಿಂದ ಮುಂಬೈ ತಂಡದ ಭಾಗವಾಗಿರುವ ಬುಮ್ರಾ, ಭಾರತೀಯ ತಂಡವನ್ನು ಹಲವು ಸಂದರ್ಭಗಳಲ್ಲಿ ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಆದರೆ ಐಪಿಎಲ್‌ನಲ್ಲಿ ನಾಯಕತ್ವ ವಹಿಸಿರುವುದು ಇದೇ ಮೊದಲು. ನಾಯಕನಾಗಿ ಕಣಕ್ಕಿಳಿದ ಮೊದಲ ಪಂದ್ಯದಲ್ಲೇ ಬುಮ್ರಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಮುಂಬೈ ಇಂಡಿಯನ್ಸ್ ಪರ ಇದು ಹೊಸ ಅಧ್ಯಾಯದ ಆರಂಭವಾಗುತ್ತದೆಯೇ ಎಂಬ ಕುತೂಹಲ ಇದೀಗ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !