July 25, 2026
Saturday, July 25, 2026
spot_img

PBKS vs RR | ರಾಯಲ್ಸ್ ಹುಡುಗರ ಆರ್ಭಟ: ಪಂಜಾಬ್‌ಗೆ ಮೊದಲ ಸೋಲಿನ ರುಚಿ ತೋರಿಸಿದ ರಾಜಸ್ಥಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನ್ ರಾಯಲ್ಸ್ ಐಪಿಎಲ್ 2026ರ ರೋಚಕ ಪಂದ್ಯದಲ್ಲಿ ಅಬ್ಬರದ ಚೇಸಿಂಗ್ ಪ್ರದರ್ಶನ ನೀಡಿ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. 223 ರನ್‌ಗಳ ಬೃಹತ್ ಗುರಿಯನ್ನು ರಾಜಸ್ಥಾನ್ 19.2 ಓವರ್‌ಗಳಲ್ಲಿ ಬೆನ್ನಟ್ಟಿ ಗೆಲುವಿನ ಸಂಭ್ರಮ ಆಚರಿಸಿತು.

ಮೊದಲು ಬ್ಯಾಟ್ ಮಾಡಿದ ಪಂಜಾಬ್ ಪರ ಪ್ರಭ್‌ಸಿಮ್ರಾನ್ ಸಿಂಗ್ 59 ರನ್‌, ಕೂಪರ್ ಕೊನೊಲಿ 30 ರನ್ ಹಾಗೂ ಮಾರ್ಕಸ್ ಸ್ಟೊಯಿನಿಸ್ ಕೇವಲ 22 ಎಸೆತಗಳಲ್ಲಿ ಅಜೇಯ 62 ರನ್‌ಗಳ ಸ್ಫೋಟಕ ಇನಿಂಗ್ಸ್ ಆಡಿದರು. ಇದರ ನೆರವಿನಿಂದ ತಂಡ 222 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

ಇದನ್ನೂ ಓದಿ:

ಗುರಿ ಬೆನ್ನಟ್ಟಿದ ರಾಜಸ್ಥಾನ್‌ಗೆ ವೈಭವ್ ಸೂರ್ಯವಂಶಿ 16 ಎಸೆತಗಳಲ್ಲಿ 43 ರನ್‌ಗಳ ವೇಗದ ಆರಂಭ ನೀಡಿದರೆ, ಯಶಸ್ವಿ ಜೈಸ್ವಾಲ್ 51 ರನ್‌ಗಳ ಅರ್ಧಶತಕ ಬಾರಿಸಿ ಗೆಲುವಿನ ಬುನಾದಿ ಹಾಕಿದರು. ಕೊನೆಯಲ್ಲಿ ಡೊನೊವನ್ ಫೆರೇರಾ ಸಿಕ್ಸರ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಈ ಗೆಲುವಿನೊಂದಿಗೆ ಈ ಸೀಸನ್‌ನಲ್ಲಿ ಪಂಜಾಬ್‌ಗೆ ಮೊದಲ ಸೋಲುಣಿಸಿದ ತಂಡ ಎಂಬ ಹೆಗ್ಗಳಿಕೆ ರಾಜಸ್ಥಾನ್ ಪಾಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !