‘ಪೇಸಿಎಂ’ ಪೋಸ್ಟರ್ ಅಂಟಿಸಿದ್ದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬೆಂಗಳೂರಿನಲ್ಲಿ ಶುಕ್ರವಾರ ‘ಪೇಸಿಎಂ’ ಪೋಸ್ಟರ್ ಅಂಟಿಸಿದ್ದಕ್ಕಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು 20 ಕ್ಕೂ ಹೆಚ್ಚು ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಗೋಡೆಯ ಮೇಲೆ ‘ಪೇಸಿಎಂ’ ಪೋಸ್ಟರ್ ಅನ್ನು ಅಂಟಿಸುತ್ತಿದ್ದ 30 ಕ್ಕೂ ಹೆಚ್ಚು ಮುಖಂಡರು ಮತ್ತು ನೂರಾರು ಪಕ್ಷದ ಕಾರ್ಯಕರ್ತರನ್ನು ನಿನ್ನೆ ರೇಸ್‌ಕೋರ್ಸ್ ಸರ್ಕಲ್‌ ನಲ್ಲಿ ಕಸ್ಟಡಿಗೆ ಪಡೆಯಲಾಗಿತ್ತು.  ನಂತರ ಅವರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಕಾಂಗ್ರೆಸ್‌ ನಾಯಕರ ವಿರುದ್ಧ ರಾಜ್ಯದ ತೆರೆದ ಸ್ಥಳಗಳ ವಿಕಾರ ಕಾಯ್ದೆ, 1951 ಮತ್ತು ಸಾರ್ವಜನಿಕ ಆಸ್ತಿಗೆ ಹಾನಿ ತಡೆ ಕಾಯ್ದೆ, 1984 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೇ ವೇಳೆ, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಆಡಳಿತಾರೂಢ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.  ಸಿದ್ದರಾಮಯ್ಯ ಅವ್ಯವಹಾರಗಳ ವಿರುದ್ಧ ಸರಕಾರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!