ಶಾಂತಿ ಸಹಬಾಳ್ವೆಯಿಂದ ಇರೋಣ ಎಂದು ಬಾಯಿ ಮಾತಲ್ಲಿ ಹೇಳಿದರೆ ಸಾಕೇ: ಪೇಜಾವರ ಶ್ರೀ ಪ್ರಶ್ನೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮುಸಲ್ಮಾನರು ಮತ್ತು ಕ್ರೈಸ್ತ ಮುಖಂಡರು ವ್ಯಾಪಾರ ನಿಷೇಧದ ಬಗ್ಗೆ ಮನವಿ ಮಾಡಿದ್ದಾರೆ. ಶಾಂತಿ-ಸಾಮರಸ್ಯ ಸೌಹಾರ್ದ ನೆಮ್ಮದಿ ಅವಶ್ಯವಾಗಿ ಬೇಕು. ಒಂದು ಗುಂಪಿನಿಂದ ಸಾಮರಸ್ಯ ಸಾಧ್ಯವಿಲ್ಲ, ನಿರಂತರವಾಗಿ ಅನ್ಯಾಯವಾದಾಗ ಬೇಸರ ನೋವು ಸ್ಫೋಟವಾಗುತ್ತದೆ ಹಿಂದೂ ಸಮಾಜ ನೋವು ಉಂಡು ಉಂಡು ಬೇಸರವಾಗಿ ಇಂದು ಸ್ಫೋಟಗೊಂಡಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ಹೇಳಿದರು.

ಬುಧವಾರ ಪೇಜಾವರ ಶ್ರೀಗಳನ್ನು ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯವರು ಭೇಟಿ ಮಾಡಿ ಹಿಜಾಬ್ ವಿರುದ್ದ ಹೈಕೋರ್ಟ್ ತೀರ್ಪನ್ನು ಖಂಡಿಸಿ ಮುಸ್ಲಿಂ ವ್ಯಾಪಾರಿಗಳು ನಡೆಸಿದ ಬಂದ್ ಗೆ ತಿರುಗೇಟಾಗಿ ಹಿಂದೂ ಸಂಘಟನೆಗಳು ಕರೆ ನೀಡಿದ ಆರ್ಥಿಕ ಬಹಿಷ್ಕಾರವನ್ನು ಹಿಂತೆಗೆ ಯುವಂತೆ ಶ್ರೀಗಳಿಗೆ ಮುಸ್ಲಿಂ ಮುಖಂಡರು ಮನವಿ ಸಲ್ಲಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶ್ರೀಗಳು, ಹಿಂದು ಸಮಾಜ ಬಹಳ ಕಾಲದಿಂದ ನೋವನ್ನು ಉಂಡಿದೆ, ಹಲವು ಅಹಿತಕರ ಘಟನೆಗಳಿಂದ ಹಿಂದು ಸಮಾಜ ಬಹಳ ನೋವಿನಲ್ಲಿದೆ. ನಾಲ್ಕು ಮಂದಿ ಧಾರ್ಮಿಕ ಮುಖಂಡರು ಕುಳಿತು ಮಾತನಾಡುವುದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ, ತಳಮಟ್ಟದಲ್ಲಿ ಇದಕ್ಕೆ ಪರಿಹಾರ ಆಗಬೇಕಾಗಿದೆ.

ಈ ಬೆಳವಣಿಗೆಗೆ ಕಾರಣ ಏನು ಎಂಬುದು ಒಂದೇ ವೇದಿಕೆಯಲ್ಲಿ ಕುಳಿತು ಚರ್ಚೆ ಮಾಡಬೇಕು. ಹಿಂದು ಸಮಾಜಕ್ಕೆ ನೋವಾಗುವ ಯಾವುದೇ ಘಟನೆಗಳು ನಡೆಯದಿದ್ದರೆ ಸಾಮರಸ್ಯ ಬೆಳೆಯಬಹುದು.

ವಿಧವೆ ಮಹಿಳೆಯ ಕೊಟ್ಟಿಗೆಯಲ್ಲಿದ್ದ ಎಲ್ಲಾ ಹಸುಗಳನ್ನು ಕಳ್ಳತನ ಮಾಡಲಾಗಿದೆ, ಆ ಮಹಿಳೆ ಬೀದಿಗೆ ಬೀಳುವ ವಾತಾವರಣ ನಿರ್ಮಾಣವಾಗಿದೆ ಇಂತಹ ಅನೇಕ ಘಟನೆಗಳು ಸಮಾಜದಲ್ಲಿ ನಡೆದು ನೋವು ಮಡುಗಟ್ಟಿದೆ. ನಾವು ಕೂಡ ಇಂತಹ ಹಲವಾರು ನೋವನ್ನು ಅನುಭವಿಸಿದ್ದೇನೆ, ನಾವು ಶಾಂತಿ ಸಹಬಾಳ್ವೆಯಿಂದ ಇರೋಣ ಎಂದು ಬಾಯಲ್ಲಿ ಹೇಳಿದರೆ ಅದು ಸಾಧ್ಯವಿಲ್ಲ, ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲಸಲು ಯಾರ ಮಧ್ಯಸ್ಥಿಕೆಯ ಬೇಡ ಎಂದರು.

ಯಾರಿಂದ ಅನ್ಯಾಯವಾಗಿದೆ ಅವರು ಸಮಸ್ಯೆ ಸರಿ ಮಾಡಿಕೊಳ್ಳಬೇಕು, ತಪ್ಪು ಮಾಡಿದವರನ್ನು ಆ ಸಮಾಜ ಶಿಕ್ಷಿಸಲಿ. ಮಾಡಿದ ತಪ್ಪನ್ನು ಆ ಸಮಾಜ ಪ್ರತಿಭಟಿಸಲಿ. ಒಬ್ಬರು ಮಾಡಿದ ಅನ್ಯಾಯ ಇಡೀ ಸಮಾಜಕ್ಕೆ ತಟ್ಟುತ್ತದೆ. ತಪ್ಪಿತಸ್ಥರಿಗೆ ಬೆನ್ನೆಲುಬಾಗಿ ನಿಲ್ಲದಿದ್ದರೆ ಹಿಂದು ಸಮಾಜಕ್ಕೆ ನೋವಾಗುವುದಿಲ್ಲ ಎಂದು ನುಡಿದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!