ಹೊಸದಿಗಂತ ಡಿಜಿಟಲ್ ಡೆಸ್ಕ್
ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ಶಾಂತಿಯುತವಾಗಿ ಸಂಪನ್ನಗೊಂಡಿದೆ.
ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ಕಣ್ಗಾವಲಿನಲ್ಲಿ 15 ಸಾವಿರ ಅಧಿಕ ದತ್ತಭಕ್ತರು ಪಾದುಕೆ ದರುಶನ ಪಡೆದರು.
ಕಳೆದ 9 ದಿನಗಳಿಂದ ವೃತ್ತಾಚಾರಣೆಯೊಂದಿಗೆ ಸಾವಿರಾರು ಮಾಲಾಧಾರಿಗಳು ಆಗಮಿಸಿದರು.ಮಳೆ-ಮಂಜು ಅತಂಕವಿದ್ದರೂ ನಿರೀಕ್ಷೆಗೂ ಮೀರಿಯೇ ಮಾಲಾಧಾರಿಗಳು ದತ್ತಪಾದುಕೆ ದರುಶನ ಪಡೆದಿದ್ದಾರೆ.
ಬಿಜೆಪಿ ಶಾಸಕ ಸಿ.ಟಿ.ರವಿ ಹೊನ್ನಮ್ಮ ಹಳ್ಳದಿಂದ ಕಾಲ್ನಡಿಗೆ ಮೂಲಕ ಇರುಮುಡಿ ಹೊತ್ತು ಪೀಠಕ್ಕೆ ತೆರಳಿ ಪಾದುಕೆ ದರುಶನ ಪಡೆದರು.
ಇನ್ನು ದತ್ತಜಯಂತಿ ಅಂಗವಾಗಿ ದತ್ತಗುಹೆ ಸಮೀಪವೇ ಹೋಮ-ಹವನ ನಡೆಸಲಾಯಿತು. ಪೂರ್ಣಾಹುತಿಯಲ್ಲಿ ವಿವಿಧ ಮಠದ ಸ್ವಾಮಿಗಳು, ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸಿ.ಟಿ.ರವಿ ಹಾಗೂ ವಿಎಚ್‌ಪಿ, ಬಜರಂಗದಳದ ಪ್ರಮುಖರು ಪಾಲ್ಗೊಂಡಿದ್ದರು.