May 21, 2026
Thursday, May 21, 2026
spot_img

ಬಂಗಾಳದ ಫಾಲ್ಟಾದಲ್ಲಿ ಶಾಂತಿಯುತ ಮರುಮತದಾನ: 87.73% ವೋಟಿಂಗ್, ಮೇ 24 ರಂದು ಫಲಿತಾಂಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಬಿಗಿ ಭದ್ರತೆಯಲ್ಲಿ ಇಂದು ಶಾಂತಿಯುತ ಮತದಾನ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 6 ಗಂಟೆ ವೇಳೆಗೆ ಮುಕ್ತಾಯಗೊಂಡಿದೆ. 87.73% ಮತದಾನ ದಾಖಲಾಗಿದೆ.

285 ಮತಗಟ್ಟೆಗಳಲ್ಲಿ ಮರುಮತದಾನ

ರಾಜ್ಯದಲ್ಲಿ ಎಪ್ರಿಲ್​ 29ರಂದು ನಡೆದಿದ್ದ ಎರಡನೇ ಹಂತದ ವಿಧಾನಸಭಾ ಚುನಾವಣಾ ಮತದಾನದಲ್ಲಿ ಫಾಲ್ಟಾ ಕ್ಷೇತ್ರದಲ್ಲಿ ಚುನಾವಣಾ ಅಪರಾಧ ಪ್ರಕರಣಗಳು ವರದಿಯಾಗಿದ್ದ ಹಿನ್ನೆಲೆ 285 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ ಆಯೋಗ ಆದೇಶಿಸಿತ್ತು.

ಬಿಜೆಪಿ ಅಭ್ಯರ್ಥಿಗೆ ಗೆಲುವಿನ ವಿಶ್ವಾಸ

ಕ್ಷೇತ್ರದಲ್ಲಿ ಟಿಎಂಸಿಯ ಜಹಾಂಗೀರ್​ ಖಾನ್​ ಸೇರಿದತೆ ಆರು ಅಭ್ಯರ್ಥಿಗಳು ಕಣದಲ್ಲಿದ್ದರು. ಆದರೆ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಜಹಾಂಗೀರ್ ಖಾನ್ ಅವರು ಮೇ 19 ರಂದೇ ಮರು ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಎಂದು ಘೋಷಿಸಿದ್ದರು. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ದೇಬಾಂಗ್ಶು ಪಾಂಡ ಗೆಲುವು ಸಾಧಿಸುವ ವಿಶ್ವಾಸ ಹೊಂದಿದ್ದಾರೆ. ಈ ಕುರಿತು ಮೇ 24 ರಂದು ಫಲಿತಾಂಶ ಪ್ರಕಟವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !