ನೀವು ಚಿಕ್ಕಿ ಪ್ರಿಯರೇ..?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಡಲೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ಕಡಲೆ ಬೀಜ ಮತ್ತು ಬೆಲ್ಲದ ಉಂಡೆ ಕಾಂಬಿನೇಷನ್‌ ಬಾಯಿಗೆ ರುಚಿ ಜೊತೆಗೆ ಆರೋಗ್ಯಕ್ಕೂ ಸಹ ಒಳ್ಳೆಯದು. ಕಡಲೆ ಉಂಡೆ, ಚಿಕ್ಕಿ, ತೆಲುಗಿನಲ್ಲಿ ಪಪ್ಪುಂಡೆ, ಪಲ್ಲಿ ಉಂಡಲು ಎಂದೂ ಕರೆಯುತ್ತಾರೆ.

ಚಿಕ್ಕಿ ಹಸಿವನ್ನು ನೀಗಿಸುವುದರ ಜೊತೆಗೆ ದೇಹಕ್ಕೆ ಬೇಕಾದ ಶಕ್ತಿಯನ್ನು ನೀಡುತ್ತದೆ. ಕಡಲೆಕಾಯಿಯಲ್ಲಿ ಫೋಲಿಕ್ ಆಮ್ಲ, ಪ್ರೋಟೀನ್, ಬೆಲ್ಲ, ಕಬ್ಬಿಣ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳಿವೆ. ಇದು ದೇಹದಲ್ಲಿ ರಕ್ತ ಪರಿಚಲನೆಯನ್ನೂ ಸುಧಾರಿಸುತ್ತದೆ. ಬೆಲ್ಲದ ಜೊತೆಗೆ ಕಡಲೆಬೀಜ ತಿನ್ನುವುದರಿಂದ ರಕ್ತಹೀನತೆಯನ್ನು ದೂರವಿಡಬಹುದು. ಬೆಲ್ಲ ಮತ್ತು ಕಡಲೆಕಾಯಿಯನ್ನು ಒಟ್ಟಿಗೆ ತಿನ್ನುವುದರಿಂದ ಮಹಿಳೆಯರ ಋತುಚಕ್ರದ ಸಮಸ್ಯೆಗಳು ನಿವಾರಣೆಯಾಗುತ್ತವೆ.

ಕಡಲೆಯಲ್ಲಿರುವ ನಾರಿನಂಶವು ಅಸಿಡಿಟಿ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಬೆಲ್ಲ ಮತ್ತು ಕಡಲೆಕಾಯಿಯಲ್ಲಿರುವ ಕ್ಯಾಲ್ಸಿಯಂ ಮತ್ತು ಪ್ರೋಟೀನ್ ಮೂಳೆಗಳು ಮತ್ತು ಹಲ್ಲುಗಳನ್ನು ಬಲಪಡಿಸುತ್ತದೆ. ಧಾನ್ಯಗಳಲ್ಲಿ ಕಂಡುಬರುವ ಸೆಲೆನಿಯಮ್, ಮೆಗ್ನೀಸಿಯಮ್ ಮತ್ತು ಕಬ್ಬಿಣವು ಸಂತಾನೋತ್ಪತ್ತಿ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ.

ದೇಹದಲ್ಲಿರುವ ಕೆಟ್ಟ ಕೊಬ್ಬನ್ನು ಕಡಿಮೆ ಮಾಡಿ ಒಳ್ಳೆಯ ಕೊಬ್ಬನ್ನು ಹೆಚ್ಚಿಸುತ್ತವೆ. ಆರೋಗ್ಯಕ್ಕೆ ಒಳ್ಳೆಯದು ಅಂತ ಹೆಚ್ಚಾಗಿ ತಿಂದರೆ ತೂಕ ಹೆಚ್ಚಾಗುವ ಸಾಧ್ಯತೆ ಇದೆ. ಜೊತೆಗೆ, ಮಲಬದ್ಧತೆ ಸಮಸ್ಯೆಗಳನ್ನು ಎದುರಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!