October 10, 2026
Saturday, October 10, 2026
spot_img

ಇಂದಿನಿಂದ ಮೂರು ದಿನ ಪೀಣ್ಯ ಮೇಲ್ಸೇತುವೆಯಲ್ಲಿ ಸಂಚಾರ ಬಂದ್ : ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪೀಣ್ಯ ಮೇಲ್ಸೇತುವೆಯಲ್ಲಿ ಅಂತಿಮ ಹಂತದ ಲೋಡ್ ಟೆಸ್ಟಿಂಗ್ ನಡೆಸುತ್ತಿರುವ ಹಿನ್ನೆಲೆ, ಇಂದಿನಿಂದ ಮೇ 8ರ ವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ.

ಕೆನ್ನಮೆಟಲ್ ವಿಡಿಯಾ ಮೇಲ್ಭಾಗದ ರಾಂಪ್‌ನಿಂದ ಎಸ್‌ಆರ್‌ಎಸ್ ಇಳಿಜಾರು ರಾಂಪ್‌ವರೆಗೆ ಹಾಗೂ ಸಿಎಂಟಿಐ ಜಂಕ್ಷನ್‌ನಿಂದ ಪಾರ್ಲೆ-ಜಿ ಟೋಲ್‌ವರೆಗಿನ ಫ್ಲೈಓವರ್ ಮೇಲೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಪೀಣ್ಯ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಈ ಮೇಲ್ಸೇತುವೆಯ ಕೇಬಲ್ ದುರಸ್ತಿ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪರ್ಯಾಯ ಮಾರ್ಗಗಳ ವಿವರ..
ನೆಲಮಂಗಲದಿಂದ ಬೆಂಗಳೂರು ಕಡೆಗೆ ಹೋಗುವವರು, ಕೆನ್ನಮೆಟಲ್ ಫ್ಯಾಕ್ಟರಿ ಬಳಿ ಡೈವರ್ಷನ್ ಪಡೆದು, ಹೆದ್ದಾರಿಯ ಕೆಳಭಾಗದ ರಸ್ತೆ ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಸ್ಟೇಷನ್ ಜಂಕ್ಷನ್, ಎಸ್‌ಆರ್‌ಎಸ್ ಜಂಕ್ಷನ್ ಮತ್ತು ಗೊರಗುಂಟೆಪಾಳ್ಯ ಮಾರ್ಗವಾಗಿ ಸಂಚರಿಸಬಹುದು.

ಸಿಎಂಟಿಐನಿಂದ ನೆಲಮಂಗಲ ಕಡೆಗೆ ಹೋಗುವವರು, ಫ್ಲೈಓವರ್ ಕೆಳಗಿನ ಎನ್‌ಎಚ್-4 ರಸ್ತೆ ಮತ್ತು ಸರ್ವಿಸ್ ರಸ್ತೆ ಬಳಸಿ ಎಸ್‌ಆರ್‌ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಸ್ಟೇಷನ್ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಮತ್ತು ಪಾರ್ಲೆ-ಜಿ ಟೋಲ್ ಮೂಲಕ ಸಂಚರಿಸಬಹುದು.

Must Read