ಅತ್ಯಂತ ವಿಷಮ ಪರಿಸ್ಥಿತಿಯಲ್ಲಿ ಫುಟ್ಬಾಲ್ ದಿಗ್ಗಜನ ಆರೋಗ್ಯ: ಆತಂಕದಲ್ಲಿ ಅಭಿಮಾನಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬ್ರೆಜಿಲ್ ಫುಟ್ಬಾಲ್ ದಂತಕಥೆ ಪೀಲೆ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ ಎಂಬ ವರದಿಗಳಿವೆ. ಕಳೆದ ವರ್ಷ ಪೀಲೆಗೆ ಕರುಳಿನ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು, ಕೂಡಲೇ ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಆ ಗೆಡ್ಡೆಯನ್ನು ತೆಗೆದರು. ಕೆಲ ದಿನಗಳ ಹಿಂದೆ ಮತ್ತೆ ಅಸ್ವಸ್ಥಗೊಂಡಿದ್ದ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆಯಂತೆ. ಸದ್ಯ ಅವರು ಕೀಮೋ ಥೆರಪಿಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಲೆಜೆಂಡರಿ ಬ್ರೆಜಿಲಿಯನ್ ಫುಟ್ಬಾಲ್ ಆಟಗಾರ ಪೀಲೆ ಕಿಮೋಥೆರಪಿ ಚಿಕಿತ್ಸೆಗೆ ಪ್ರತಿಕ್ರಿಯಿಸುತ್ತಿಲ್ಲ. ಪರಿಣಾಮವಾಗಿ, ಅವರನ್ನು ಸಾವೊ ಪಾಲೊ ಆಸ್ಪತ್ರೆಯಲ್ಲಿ ಉಪಶಾಮಕ ಆರೈಕೆಗೆ ಸ್ಥಳಾಂತರಿಸಲಾಯಿತು. ಮತ್ತೆ ಅವರನ್ನು ಕ್ಯಾನ್ಸರ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪೆಲೆ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿರುವುದಾಗಿ ವೈದ್ಯರು ಕಂಡುಕೊಂಡರು.

ದೇಹದಲ್ಲಿ ಊತ ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ಅಭಿಮಾನಿಗಳಿಗೆ ಪೀಲೆ ಪುತ್ರಿ ಪ್ರತಿಕ್ರಿಯಿಸಿದ್ದಾರೆ. ತಂದೆ ಪೀಲೆ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ತುರ್ತು ಪರಿಸ್ಥಿತಿ ಇಲ್ಲ ಮತ್ತು ಭಯಪಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ತಂದೆಯೊಂದಿಗೆ ಹೊಸ ವರ್ಷವನ್ನು ಆಚರಿಸುವುದಾಗಿಯೂ ತಿಳಿಸಿದ್ದಾಳೆ

ಪೀಲೆಗೆ 82 ವರ್ಷ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅವರ ದೊಡ್ಡ ಕರುಳಿನಿಂದ ಗೆಡ್ಡೆಯನ್ನು ತೆಗೆದುಹಾಕಲಾಯಿತು. ಅಂದಿನಿಂದ ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಆಸ್ಪತ್ರೆಗೆ ದಾಖಲಾಗುತ್ತಿದ್ದು, ಕೀಮೋ ಥೆರಪಿ ಚಿಕಿತ್ಸೆ ನೀಡಲಾಗುತ್ತಿದೆ. ಪೀಲೆ ಅವರು ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ ಒಟ್ಟು 1363 ಪಂದ್ಯಗಳನ್ನು ಆಡಿದ್ದು, 1279 ಗೋಲುಗಳನ್ನು ಗಳಿಸಿದ್ದಾರೆ. ಮೂರು ವಿಶ್ವಕಪ್ ಗೆದ್ದ ಏಕೈಕ ಆಟಗಾರ ಪೀಲೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!