ಪೆನ್‌ಡ್ರೈವ್‌​ ಪ್ರಕರಣ: ದೇವರಾಜೇಗೌಡ ನನ್ನನ್ನು ಭೇಟಿಯಾಗಿದ್ದು ನಿಜ, ಶಿವರಾಮೇಗೌಡ ಅಚ್ಚರಿ ಹೇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳನ್ನು ಹೊಂದಿರುವ ಪೆನ್​​ಡ್ರೈವ್ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿದೆ.

ಈ ಪೆನ್​​ಡ್ರೈವ್ ಬಿಡುಗಡೆ ಹಿಂದೆ ಮಾಜಿ ಸಂಸದ ಶಿವರಾಮೇಗೌಡರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿತ್ತು. ಪೆನ್​​ಡ್ರೈವ್ ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಂಸದ ಶಿವರಾಮೇಗೌಡ ಹೇಳಿದ್ದಾರೆ. ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿಸುವಂತೆ ದೇವರಾಜೇಗೌಡ ನನ್ನ ದುಂಬಾಲು ಬಿದ್ದೀದ್ದನು. ಆದರೂ ಕೂಡ ನನ್ನ ಹೆಸರು ಹೇಳಿದ್ದು ವಿಷಾದ ಎಂದು ಮಾಜಿ ಸಂಸದ ಶಿವರಾಮೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನಾನು ಆಫೀಸ್​ನಲ್ಲಿದ್ದಾಗ ಹೊಳೆನರಸಿಪುರದ ಕೆಲವರು ಬಂದಿದ್ದರು. ದೇವರಾಜೇಗೌಡ ನಿಮ್ಮನ್ನು ಭೇಟಿ ಮಾಡಬೇಕು ಅಂತ ನನಗೆ ಹೇಳಿದರು.

ಬಳಿಕ ದೇವರಾಜೇಗೌಡಗೆ ಫೋನ್​ ಮಾಡಿಕೊಟ್ಟರು. ಆಗ ನಾನು “ಏನಪ್ಪ ಚೆನ್ನಾಗಿದ್ದೀಯಾ, ನಿನ್ನ ಆಸೆ ಈಡೇರಿತು. ವರ್ಷಾನುಗಟ್ಟಲೇ ಹೋರಾಟ ಮಾಡುತ್ತಿದ್ದೆ. ಎಲ್ಲವೂ ಆಚೆಗೆ ಬಂತು” ಅಂತ ಫೋನ್​ನಲ್ಲಿ ಇಷ್ಟೇ ಮಾತನಾಡಿದ್ದೇನೆ ಎಂದು ಶಿವರಾಮೇಗೌಡ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!