ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಲಿಖಿತ್ ಗೌಡ, ಚೇತನ್ ಜಾಮೀನು(Bail) ಅರ್ಜಿ ವಜಾಗೊಂಡಿದೆ.
ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಾದ ಲಿಖಿತ್, ಚೇತನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು (ಇಂದು (ಮೇ 14) ಹಾಸನದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ವಜಾ ಮಾಡಿ ಆದೇಶ ಹೊರಡಿಸಿದೆ.
ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಲಿಖಿತ್ ಗೌಡ, ಚೇತನ್ ಅವರನ್ನು ಎಸ್ಐಟಿ ಅಧಿಕಾರಿಗಳು ಮೇ 12ರಂದು ಬಂಧಿಸಿದ್ದರು. ಬಳಿಕ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದೀಗ ಆರೋಪಿಗಳ ಜಾಮೀನು ಅರ್ಜಿ ಸಹ ವಜಾಗೊಂಡಿದೆ.