ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ವಿಚಾರ ಮುನ್ನೆಲೆಗೆ ಬಂದಿದ್ದು, ಇದೀಗ ಶಾಸಕ ಲಕ್ಷ್ಮಣ ಸವದಿ ಪುತ್ರ ಪೆಂಡೆಂಟ್ ಧರಿಸಿರುವ ಫೋಟೊ ವೈರಲ್ ಆಗಿದೆ.
ಈಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕುತ್ತಿಗೆಯಲ್ಲಿ ಪೆಂಡೆಂಟ್ ಇರುವ ಫೋಟೊ ವೈರಲ್ ಆಗಿದ್ದು, ಅರಣ್ಯಾಧಿಕಾರಿಗಳು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಈ ಪೆಂಡೆಂಟ್ ಒರಿಜಿನಲ್ ಅಲ್ಲ ಪ್ಲಾಸ್ಟಿಕ್ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದೀಗ ಸವದಿ ಪುತ್ರ ಸುಮಿತ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಫೋಟೊ ವೈರಲ್ ಆಗಿದೆ.