ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಾದ್ಯಂತ ಸೂರ್ಯನ ಶಾಖ ಹೆಚ್ಚಾಗಿದ್ದು, ಉರಿ ಸೆಕೆಗೆ ಜನ ಬಳಲಿ ಬೆಂಡಾಗಿದ್ದಾರೆ. ಅದರಲ್ಲೂ ಪ್ರಮುಖವಾಗಿ ಬಿಸಿ ವಾತಾವರಣದಿಂದ ಎಚ್ಚರಿಕೆಯಿಂದ ಇರುವಂತೆ ಉತ್ತರ ಕನ್ನಡ ಜಿಲ್ಲೆಗೆ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸೇರಿದಂತೆ ಹಲವು ತಾಲೂಕುಗಳಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗಿದ್ದು, ಬಿಸಿ ವಾತಾವರಣ ಹಾಗೂ ತೇವಾಂಶದ ವಾತಾವರಣ ಇರಲಿದೆ. ಮುಂದಿನ 3 ದಿನದ ವರೆಗೆ ಈ ಅಲರ್ಟ್ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.