ಶೂ ಹಾಕ್ಕೊಂಡು ದೇವಸ್ಥಾನದ ಆವರಣದಲ್ಲಿ ಫೋಟೊಶೂಟ್‌: ಜನರಿಂದ ಹಲ್ಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದೇವಸ್ಥಾನದ ಬಳಿ ಪ್ರೀ ವೆಡ್ಡಿಂಗ್ ಶೂಟಿಂಗ್ ನಡೆಸುತ್ತಿದ್ದ ಫೋಟೋಗ್ರಾಫರ್‌ಗಳ ಮೇಲೆ ಸ್ಥಳೀಯ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಬೆಟ್ಟದ ಬೈರವೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ದೇವಾಲಯದ ಆವರಣದಲ್ಲಿ ನಿಯಮ ಉಲ್ಲಂಘಿಸಿ ಚಪ್ಪಲಿ, ಶೂಧರಿಸಿ ಫೋಟೋಶೂಟ್ ಮಾಡಿದ್ದೇ ಸ್ಥಳೀಯರ ಆಕ್ರೋಶಕ್ಕೆ ಕಾರಣ ಎಂದು ಹೇಳಲಾಗಿದೆ. ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರವಾದ ಸಕಲೇಶಪುರದ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ … Continue reading ಶೂ ಹಾಕ್ಕೊಂಡು ದೇವಸ್ಥಾನದ ಆವರಣದಲ್ಲಿ ಫೋಟೊಶೂಟ್‌: ಜನರಿಂದ ಹಲ್ಲೆ