ಜಮೀರ್ ಅಹ್ಮದ್ ಆಂಗ್ಲ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕಾರಕ್ಕೆ ಖಂಡನೆ

ಹೊಸದಿಗಂತ ವರದಿ ಕಲಬುರಗಿ:

ನೂತನ ಸಚಿವರಾಗಿ ಜಮೀರ್ ಅಹಮದ್ ಅವರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು, ಭಾಷಾವಾರು ರಾಜ್ಯಗಳಿಗೆ ಮಾಡಿದ ಅಪಮಾನವಾಗಿದೆ. ಸುಂದರ ಸಮಾರಂಭಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಕನ್ನಡಪರ ಹೋರಾಟಗಾರ ಆನಂದ ತೆಗನೂರ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಜಮೀರ್ ಅಹ್ಮದ್ ಖಾನ್ ಕನ್ನಡ ವಿರೋಧಿ ನಡೆಯನ್ನು, ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸುತ್ತವೆ.‌ ಕರ್ನಾಟಕ ಸರಕಾರ ಕನ್ನಡವನ್ನು ಅಧಿಕೃತವಾಗಿ ಆಡಳಿತ ಭಾಷೆ ಎಂದು ಒಪ್ಪಿದೆ. ಕನ್ನಡವನ್ನು ಅನುಷ್ಠಾನಗೊಳಿಸಬೇಕಾದ ಸಚಿವರೇ ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ತೀರ ಅನುಚಿತ ನಡೆಯಾಗಿದೆ ಎಂದರು.

ಈ ವಿಷಯವನ್ನು ಮುಖ್ಯಮಂತ್ರಿ ಅವರು ಗಂಭೀರವಾಗಿ ಪರಿಗಣಿಸಿ, ತಮ್ಮ ಸಚಿವ ಸಂಪುಟದ ಸಚಿವರು ಕನ್ನಡದಲ್ಲೇ ಆಡಳಿತ ನಡೆಸುವುದರ ಜೊತೆಗೆ ಸಾರ್ವಜನಿಕವಾಗಿ ಮತ್ತು ವೈಯಕ್ತಿಕವಾಗಿ ಕನ್ನಡದಲ್ಲೇ ವ್ಯವಹರಿಸುವಂತೆ ಸೂಚಿಸಬೇಕೆಂದು ಅವರು ಸರಕಾರಕ್ಕೆ ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!