Thursday, March 30, 2023

Latest Posts

ಕುರಗೋಡ್ ನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಜನವೋ ಜನ

ಹೊಸದಿಗಂತ ವರದಿ ಬಳ್ಳಾರಿ:

ಮುಂಬರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದೇ ಗೆಲ್ಲಬೇಕು ಎಂದು ಸಂಕಲ್ಪ ಮಾಡಿರುವ ಬಿಜೆಪಿ ರಾಜ್ಯಾದ್ಯಂತ ಸುಮಾರು ತಂಡಗಳನ್ನು ರಚಿಸಿ, ವಿಜಯ ಸಂಕಲ್ಪ ಯಾತ್ರೆಯನ್ನು ಹಮ್ಮಿಕೊಂಡಿದ್ದು, ಅತ್ಯಂತ ಯಶಸ್ವಿಯಾಗಿ ನಡೆಯಿತ್ತಿದೆ.

ಆಸ್ಸಾಂ ರಾಜ್ಯದ ಮುಖ್ಯಮಂತ್ರಿ ಹೇಮಂತ್ ಬಿಸ್ವಾಸ್ ಶರ್ಮಾ ಅವರ ನೇತೃತ್ವದ ತಂಡ ಸೋಮವಾರ ಸಂಜೆ ಜಿಲ್ಲೆಯ ಸಿರುಗುಪ್ಪ ನಗರಕ್ಕೆ ಪ್ರವೇಶಿಸಿ, ಅದ್ದೂರಿ ಕಾರ್ಯಕ್ರಮ ನಡೆಸಿತ್ತು. ಮಂಗಳವಾರ ಬೆಳಿಗ್ಗೆ ಜಿಲ್ಲೆಯ ಕುರಗೋಡ್ ಪಟ್ಟಣಕ್ಕೆ ಆಗಮಿಸಿದ ತಂಡ, ತೆರೆದ ವಾಹನದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೃಹತ್ ರೋಡ್ ಶೋ ನಡೆಯಿತು. ದಾರಿಯುದ್ದಕ್ಕೂ ಜನರಿಂದ ಹೂಮಳೆ ಸುರಿದವು.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಆಸ್ಸಾಂ ರಾಜ್ಯದ ಮುಖ್ಯಮಂತ್ರಿ ಹೇಮಂತ್ ಬಿಸ್ವಾಸ್ ಶರ್ಮಾ, ಸಚಿವ ಬಿ.ಶ್ರೀರಾಮುಲು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮಾಜಿ ಶಾಸಕ ಟಿ.ಎಚ್.ಸುರೇಶ್ ಬಾಬು ಸೇರಿದಂತೆ ಅನೇಕ ಗಣ್ಯರು ಜನರಿಗೆ ಕೈ ಬೀಸುತ್ತಾ ನಗುಮುಖದಲ್ಲೇ ಮುಂದೆಸಾಗಿದರು.

ಇಡೀ ಪಟ್ಟಣ ಕೇಸರಿ ಮಯವಾಗಿತ್ತು. ಯಾತ್ರೆಯಲ್ಲಿ ಬಿಜೆಪಿ ಬಾವುಟಗಳು ರಾರಾಜಿಸಿದವು. ಪಟ್ಟಣದ ಗೆಣಕಿಹಾಳ್ ರಸ್ತೆಯ ಶ್ರೀ ಗಾದಿಲಿಂಗಪ್ಪ ತಾತನವರ ಶ್ರೀಮಠದಿಂದ ಪ್ರಾರಂಭವಾದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ,ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಶ್ರೀ ದೊಡ್ಡಬಸವೇಶ್ವರ ದೇಗುಲ ತಲುಪಿತು.

ಈ ಸಂದರ್ಭದಲ್ಲಿ ಎಮ್ಮೆಲ್ಸಿ ವೈ.ಎಂ.ಸತೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಗೋನಾಳ್ ಮುರಹರಗೌಡ, ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಸಂದರಾದ ಕರಡಿ ಸಂಗಣ್ಣ, ವೈ.ದೇವೇಂದ್ರಪ್ಪ, ಮಾಜಿ ಸಂಸದರಾದ ಜೆ.ಶಾಂತಾ, ಸಣ್ಣ ಫಕೀರಪ್ಪ, ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿದ್ದೇಶ್ ಯಾದವ್, ಮಹಿಳಾ ಘಟಕದ ಅಧ್ಯಕ್ಷೆ ಸುಗುಣ ಸೇರಿದಂತೆ ಪಕ್ಷದ ಅನೇಕ ಗಣ್ಯರು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!