ಹೊಸದಿಗಂತ ಬಾಗಲಕೋಟೆ:
ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ, ಬಿಜೆಪಿ-ಜೆಡಿಎಸ್ ಪಕ್ಷಗಳ ಅಪಪ್ರಚಾರಕ್ಕೆ ತಕ್ಕ ಉತ್ತರ ನೀಡಿದ್ದಾರೆ ಎಂದು ಬಿಟಿಡಿಎ ಅಧ್ಯಕ್ಷರೂ ಆದ ಬಾಗಲಕೋಟೆ ಶಾಸಕ ಎಚ್.ವೈ. ಮೇಟಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿಗಳ ಮೇಲೆ ಮುಡಾ ಆರೋಪ ಹೊರಿಸಿ, ಅವರ ಜನಪ್ರೀಯತೆ ಕುಗ್ಗಿಸುವ ಕುತಂತ್ರ ವಿಫಲವಾಗಿದೆ. ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ಎಲ್ಲ ವರ್ಗದ ಜನರ ಪರವಾಗಿದ್ದಾರೆ. ಬಡವರು, ಶೋಷಿತರು, ಹಿಂದುಳಿದವರ ಏಳ್ಗೆಗಾಗಿ, ತಮ್ಮ ರಾಜಕೀಯ ಬದುಕಿನುದ್ದಕ್ಕೂ ಕೆಲಸ ಮಾಡಿದ್ದಾರೆ. ಬಿಜೆಪಿ, ಜೆಡಿಎಸ್ ಪಕ್ಷದವರು ಎಷ್ಟೇ ಕುತಂತ್ರ ನಡೆಸಿದರೂ, ಕಾಂಗ್ರೆಸ್ ಸರ್ಕಾರವನ್ನು ಜನರು ಮೆಚ್ಚಿಕೊಂಡಿದ್ದಾರೆ ಎಂಬುದಕ್ಕೆ ಪ್ರಸ್ತುತ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವೇ ಸಾಕ್ಷಿ ಎಂದು ಹೇಳಿದ್ದಾರೆ.