ಹೊಸದಿಗಂತ ವರದಿ, ಹುಬ್ಬಳ್ಳಿ
ಆರ್ ಎಸ್ ಎಸ್ ಸಂಘಟನೆ ಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಜನರಿಗೆ ಆರ್ ಎಸ್ ಎಸ್ ಬಗ್ಗೆ ಎಲ್ಲವೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಆರ್ ಎಸ್ ಎಸ್ ಸಂಘಟನೆ 75 ವರ್ಷಗಳಿಂದ ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ ತೊಡಗಿದೆ. ಹಲವಾರು ಸಂದರ್ಭಗಳಲ್ಲಿ ಅನಾಹುತಗಳಾದಾಗ ಜನರ ಸಂಕಷ್ಟಕ್ಕೆ ಸ್ಪಂದಿಸಲು ಅವರ ಪರವಾಗಿ ಆರ್ ಎಸ್ ಎಸ್ ನಿಂತಿದೆ.ವಿವಿಧ ರಾಜ್ಯಗಳಲ್ಲಿ ಆರ್ ಎಸ್ ಎಸ್ ಉತ್ತಮವಾಗಿ ಕೆಲಸ ಮಾಡಿದೆ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಆರ್ ಎಸ್ ಎಸ್ ವಿರೋಧಿಗಳು. ಅವರ ಇಂತಹ ಧೋರಣೆಯಿಂದ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದ್ದು, ಕರ್ನಾಟಕದಲ್ಲಿಯೂ ಹೀಗೆ ಆಗಲಿದೆ ಎಂದರು.
ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿಯೂ ರಾಜಕೀಯ ಮಾಡುತ್ತಿದ್ದು, ಶಿಕ್ಷಣ ಸಚಿವರು ಇದಕ್ಕೆ ಉತ್ತರ ನೀಡಲಿದ್ದಾರೆ ಎಂದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ